ಬೆಂಗಳೂರು: ಮುಂದಿನ 5 ದಿನ ಭರ್ಜರಿ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ಕೊಟ್ಟಿದ್ದು, 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ (Yellow Alert) ಘೋಷಿಸಿದೆ.
ಬೆಂಗಳೂರಿನ (Bengaluru) ಕೆಲವು ಕಡೆ ಮೋಡ ಕವಿದ ವಾತಾವರಣವಿದ್ದು, ಇಂದು ಕೂಡ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಅಬ್ಬರದ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಇದನ್ನೂ ಓದಿ: ನಾಳೆ, ನಾಡಿದ್ದು ನೀರು ಪೂರೈಕೆಯಲ್ಲಿ ವ್ಯತ್ಯಯ – ಬೆಂಗಳೂರಿಗರೇ ನೀರು ಸಂಗ್ರಹಿಸಿಟ್ಟುಕೊಳ್ಳಿ
Advertisement
Advertisement
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದೆ. ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಇದನ್ನೂ ಓದಿ: ಶಾಸಕ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ
Advertisement