ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಾಳೆ (ಆ.3) ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ (School Holiday) ಘೋಷಿಸಲಾಗಿದೆ.
ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶ ಹೊರಡಿಸಿದ್ದಾರೆ. ಮಂಗಳೂರು, ಉಳ್ಳಾಲ, ಮೂಡಬಿದ್ರೆ, ಬಂಟ್ವಾಳ, ಮುಲ್ಕಿ ತಾಲೂಕಿನಲ್ಲಿ ಅಂಗನವಾಡಿಯಿಂದ ಹತ್ತನೇ ತರಗತಿಯವರೆಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಮುಂದುವರಿದ ಮಳೆ ಆರ್ಭಟ; ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕಿನಲ್ಲಿ ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ಹಾಗೂ ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಉ.ಕನ್ನಡದಲ್ಲಿ ಮಳೆ; ಜೋಯಿಡಾ, ದಾಂಡೇಲಿ ಶಾಲಾ – ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ
