ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಿರಂತರ ಮಳೆ (Rain) ಸುರಿಯುತ್ತಿದ್ದು, ಮುಂದಿನ 3 ಗಂಟೆಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.
ಬೆಂಗಳೂರು ನಗರದಲ್ಲಿ ಇಂದು (ಸೋಮವಾರ) ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮುಂದಿನ ಮೂರ್ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ರಾಜ್ಯದ ಹಲವೆಡೆ ಮಳೆ ಸುರಿಯುತ್ತಿದ್ದು, 17 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ಉಪ ಚುನಾವಣೆ | ಚನ್ನಪಟ್ಟಣಕ್ಕೆ ಸಚಿವ ಚೆಲುವರಾಯಸ್ವಾಮಿ ಉಸ್ತುವಾರಿ
Advertisement
Advertisement
ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯ ಸಂಭವವಿದೆ. ಇದನ್ನೂ ಓದಿ: ICC Women’s T20 World Cup | ನ್ಯೂಜಿಲೆಂಡ್‌ಗೆ ಚೊಚ್ಚಲ ಚಾಂಪಿಯನ್ ಕಿರೀಟ
Advertisement
Advertisement
ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದ್ದು, ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಅ.22ಕ್ಕೆ ರಾಜ್ಯದ ಅತಿ ಎತ್ತರದ ಶ್ರೀರಾಮಾಂಜನೇಯ ಮೂರ್ತಿ ಲೋಕಾರ್ಪಣೆ