ಬೆಂಗಳೂರು: ಭಾರೀ ಮಳೆಯ (Heavy Rain) ಹಿನ್ನೆಲೆ ಬೆಂಗಳೂರು (Bengaluru) ನಗರ ಜಿಲ್ಲೆಯಾದ್ಯಂತ ಇಂದು (ಸೋಮವಾರ) ರಜೆ (Holiday) ಘೋಷಿಸಿ ಡಿಸಿ ಜಗದೀಶ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸೋಮವಾರ ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಮೌಖಿಕವಾಗಿ ಆದೇಶಿಸಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣಕ್ಕೆ ಡಿಕೆ ಸುರೇಶ್, ಸಂಡೂರಿಗೆ ಅನ್ನಪೂರ್ಣ – ಶೀಘ್ರವೇ ಅಧಿಕೃತ ಪ್ರಕಟಣೆ ಸಾಧ್ಯತೆ
Advertisement
Advertisement
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಇನ್ನೇನು ಹೊರಡಿಸಲಾಗುವುದು ಎಂದು ಡಿಸಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮುಂದಿನ 3 ಗಂಟೆ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ – 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Advertisement
ಕಾಲೇಜುಗಳಲ್ಲಿ ಪಾಠ, ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸಬೇಕು. ದುರ್ಬಲ/ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಿ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸಬೇಕಾಗಿ ಸೂಚಿಸಲಾಗಿದೆ. ಇದನ್ನೂ ಓದಿ: ಉಪ ಚುನಾವಣೆ | ಚನ್ನಪಟ್ಟಣಕ್ಕೆ ಸಚಿವ ಚೆಲುವರಾಯಸ್ವಾಮಿ ಉಸ್ತುವಾರಿ
Advertisement
ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳಬೇಕು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅ.22ಕ್ಕೆ ರಾಜ್ಯದ ಅತಿ ಎತ್ತರದ ಶ್ರೀರಾಮಾಂಜನೇಯ ಮೂರ್ತಿ ಲೋಕಾರ್ಪಣೆ