ಮಂಗಳೂರು/ ಉಡುಪಿ: ಸೋಮವಾರ ಭಾರೀ ಮಳೆಯಾಗಲಿರುವ (Heavy Rain) ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ 5 ತಾಲೂಕುಗಳಿಗೆ ಮತ್ತು ಉಡುಪಿ (Udupi) ಜಿಲ್ಲೆಯ ಶಾಲೆಗಳಿಗೆ (School) ರಜೆ ಘೋಷಿಸಲಾಗಿದೆ
ಮಂಗಳೂರು, ಉಳ್ಳಾಲ, ಬಂಟ್ವಾಳ, ಮುಲ್ಕಿ ಮತ್ತು ಮೂಡಬಿದ್ರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಪ್ರಕಟಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ 10ನೇ ತರಗತಿಯವರೆಗೆ ರಜೆ ಘೋಷಣೆ ಮಾಡಿದ್ದಾರೆ.