DistrictsKarnatakaLatestMain PostUdupiUttara Kannada

ಭಾರೀ ಮಳೆ- ಉತ್ತರ ಕನ್ನಡ, ಉಡುಪಿ ಶಾಲಾ, ಕಾಲೇಜುಗಳಿಗೆ ರಜೆ

Advertisements

ಕಾರವಾರ/ಉಡುಪಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ, ಅಂಗನವಾಡಿಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ.

ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಸೂಚನೆಯಂತೆ ಇಂದು ರಜೆ ಘೋಷಣೆ ಮಾಡಲಾಗಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಮುಂದುವರಿದರೆ ಮತ್ತೆ ರಜೆ ಮುಂದುವರಿಸುವ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಹವಾಮಾನ ವೈಪರೀತ್ಯ – ಅಮರನಾಥ ಯಾತ್ರಾ ತಾತ್ಕಾಲಿಕ ಸ್ಥಗಿತ

ಘಟ್ಟ ಪ್ರದೇಶವಾಗಿರುವುದರಿಂದ ಮಕ್ಕಳಿಗೆ ಶಾಲಾ-ಕಾಲೇಜುಗಳಿಗೆ ಬರುವುದಕ್ಕೆ ಕಷ್ಟವಾಗುತ್ತಿದೆ. ಹೀಗಾಗಿ ರಜೆ ಘೋಷಣೆ ಮಾಡಲಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯಲ್ಲಿ ರಜೆಗೆ ಸೂಚನೆ ನೀಡಲಾಗಿದೆ.

ಉಡುಪಿಯಲ್ಲಿ ಆರೆಂಜ್ ಅಲರ್ಟ್:
ಉಡುಪಿ ಜಿಲ್ಲೆಯಲ್ಲೂ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಹವಾಮಾನ ಇಲಾಖೆ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಿದೆ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಜಿಲ್ಲೆಯಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ ಇದ್ದು ಹೆಬ್ರಿ, ಕುಂದಾಪುರ, ಬೈಂದೂರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ನದಿ-ಸಮುದ್ರದ ಹತ್ತಿರವಿರುವ ಜನರಿಗೆ ಮುನ್ನೆಚ್ಚರಿಕೆ ರವಾನೆ ಮಾಡಲಾಗಿದ್ದು, ಮೀನುಗಾರಿಕೆ ನಡೆಸದಂತೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.

Live Tv

Leave a Reply

Your email address will not be published.

Back to top button