ಹೈದರಾಬಾದ್: ಅಕಾಲಿಕ ಮಳೆಯಬ್ಬರಕ್ಕೆ ಆಂಧ್ರಪ್ರದೇಶ ಅಕ್ಷರಶಃ ನಲುಗಿ ಹೋಗಿದೆ. ಪುಣ್ಯಕ್ಷೇತ್ರ ತಿರುಪತಿಯ ದೃಶ್ಯಗಳು ಭಕ್ತರನ್ನು ಬೆಚ್ಚಿಬೀಳಿಸಿವೆ. ಆಂಧ್ರದಲ್ಲಿ ಇದುವರೆಗೆ ಮಳೆಗೆ 24 ಮಂದಿ ಸಾವನ್ನಪ್ಪಿದ್ದಾರೆ.
Advertisement
ಮಳೆಯಿಂದಾಗಿ 21 ಹಳ್ಳಿಗಳು ಜಲಾವೃತಗೊಂಡಿವೆ. ಇಂದು ಸಹ ಚಿತ್ತೂರು, ಕಡಪ, ಅನಂತಪುರಂ, ಕರ್ನೂಲ್ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ತಿರುಪತಿಯಲ್ಲಿ ಮತ್ತಷ್ಟು ಪ್ರವಾಹದ ಆತಂಕ ಇದೆ. ಇನ್ನೂ ಕೇರಳದಲ್ಲಿ ಮಳೆಯಬ್ಬರ ಸದ್ಯಕ್ಕೆ ನಿಲ್ಲುವ ಯಾವುದೇ ಲಕ್ಷಣಗಳಿಲ್ಲ. ಕೇರಳದ ಎಲ್ಲ ಜಿಲ್ಲೆಗಳಲ್ಲಿ ನವೆಂಬರ್ 25ರವರೆಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: ಆಂಧ್ರಪ್ರದೇಶದಲ್ಲಿ ವರುಣನ ಆರ್ಭಟ – 14 ಮಂದಿ ಸಾವು, 18ಕ್ಕೂ ಹೆಚ್ಚು ಮಂದಿ ನಾಪತ್ತೆ
Advertisement
#WATCH | Indian Navy drops relief material in various flood-affected areas of Andhra Pradesh’s Kadapa district
(Source: Eastern Naval Command) pic.twitter.com/xZDMRa3acX
— ANI (@ANI) November 20, 2021
Advertisement
ರಾಜ್ಯದ ಪರಿಸ್ಥಿತಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿದ್ದು, ರಾಜ್ಯಕ್ಕೆ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಭಾರೀ ಮಳೆಗೆ ಕಟ್ಟಡ ಕುಸಿತ – ಇಬ್ಬರು ಮಕ್ಕಳ ಸಾವು
Advertisement