ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ ಅಕಾಲಿಕ ಮಳೆ ಅವಾಂತರ ಸೃಷ್ಟಿಸಿದೆ. ಭಾರೀ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
Advertisement
ಚಿಕ್ಕೋಡಿ ತಾಲೂಕಿನ ವಿವಿಧೆಡೆ ಆಲೆಕಲ್ಲು ಸಹಿತ ಭಾರೀ ಮಳೆ ಸುರಿದಿದ್ದು, ರಾಯಭಾಗ ತಾಲೂಕಿನಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ರಾಯಭಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ 4 ಮನೆಗಳ ಮೇಲ್ಛಾವಣಿ ಹಾರಿ ಹೋಗಿದ್ದು, ಮನೆಯ ಮೇಲ್ಛಾವಣಿಯ ಶೆಡ್ ಬಿದ್ದು 12 ವರ್ಷದ ವಿಠ್ಠಲ ಧರ್ಮಟ್ಟಿ ಎಂಬ ಬಾಲಕನ ತಲೆಗೆ ಪೆಟ್ಟು ಬಿದ್ದಿದೆ. ಇದನ್ನೂ ಓದಿ: ಸತತ 15ನೇ ದಿನ ಏರಿಕೆ – ಪೆಟ್ರೋಲ್, ಡೀಸೆಲ್ 80 ಪೈಸೆ ಏರಿಕೆ
Advertisement
Advertisement
ರಾಯಭಾಗ ತಾಲೂಕಿನ ಗುಂಡವಾಡ ಗ್ರಾಮದಲ್ಲಿ ಆಯೋಜಿಸಿದ್ದ ಪಂಚ ಕಲ್ಯಾಣ ಮಹೋತ್ಸವ ಮೇಲೂ ಅಕಾಲಿಕ ಮಳೆ ಅವಾಂತರವನ್ನುಂಟು ಮಾಡಿದ್ದು ಭಾರೀ ಬಿರುಗಾಳಿಯಿಂದ ಪಂಚ ಕಲ್ಯಾಣ ಮಹೋತ್ಸವದಲ್ಲಿ ಅಳವಡಿಸಿದ್ದ ಮೇಲ್ಚಾಚಣಿಗಳು ಗಾಳಿಗೆ ಹಾರಿ ಹೋಗಿವೆ.
Advertisement
ಬಿರುಗಾಳಿಗೆ ಹೆದರಿ ಜನ ಆತಂಕದಲ್ಲಿ ಓಡಿ ಹೋಗಿದ್ದು, ಪಂಚ ಕಲ್ಯಾಣ ಮಹೋತ್ಸವಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಯುಂಟಾಗಿದೆ. ಇನ್ನೂ ಅಥಣಿ ತಾಲೂಕಿನ ಕೊಕಟನೂರು ಗ್ರಾಮದಲ್ಲಿ ಮಳೆಯ ಕಾರಣ ವಿದ್ಯುತ್ ಟ್ರಾನ್ಸ್ ಫಾರ್ಮರ್ ಮೂಲಕ ವಿದ್ಯುತ್ ಹರಿದ ಪರಿಣಾಮ ಎರಡು ಕುರಿಗಳು ಸಾವನ್ನಪ್ಪಿವೆ. ಇದನ್ನೂ ಓದಿ: ಖಾದಿ ತೊರೆದು ಕಾವಿ ತೊಡಲಿರುವ ಬಿಎಸ್‍ವೈ ಆಪ್ತ ಪುಟ್ಟಸ್ವಾಮಿ