ಬೆಳಗಾವಿ: ನಗರದಲ್ಲಿ ಒಂದು ಗಂಟೆಗಳ ಕಾಲ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ಇದರಿಂದ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿ ಜನ ಓಡಾಡಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಕೈಗಾರಿಕಾ ಪ್ರದೇಶದಲ್ಲಿ ದಿಢೀರ್ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ಚರಂಡಿ ನೀರು ರಸ್ತೆ ಮೇಲೆ ಬಂದು ವಾಹನ ಸಂಚಾರಕ್ಕೆ ಭಾರೀ ತೊದರೆ ಉಂಟಾಗಿತ್ತು. ಇದರಿಂದ ಬೇಸತ್ತ ಜನಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕೊಡಗಿನ ಹಲವೆಡೆ ಗುಡುಗು ಸಹಿತ ಮಳೆ – ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ
ಇದರ ನಡುವೆ ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ನಗರವಾಸಿಗಳು ಮಳೆಯಿಂದ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಸಕಲೇಶಪುರದಲ್ಲಿ ಭಾರೀ ಮಳೆ – ಸಿಡಿಲು ಬಡಿದು ಮೂವರು ಮಹಿಳೆಯರಿಗೆ ಗಾಯ, ಓರ್ವಳ ಸ್ಥಿತಿ ಗಂಭೀರ

