ಬೆಂಗಳೂರು: ಹಲವು ದಿನಗಳಿಂದ ಬಿಸಿಲಿನ ಬೇಗೆಯಿಂದಿದ್ದ ಸಿಲಿಕಾನ್ ಸಿಟಿಗೆ ಇಂದು (ಶನಿವಾರ) ವರುಣದೇವ (Rain in Bengaluru) ತಂಪೆರೆದಿದ್ದಾನೆ.
ಹೌದು. ಮಧ್ಯಾಹ್ನದ ಬಳಿಕ ನಗರದ ಹಲವು ಭಾಗಗಳಲ್ಲಿ ಮಳೆಯಾಗಿದೆ. ಮೆಜೆಸ್ಟಿಕ್, ಗಾಂಧಿ ನಗರ, ಕೆಆರ್ ಸರ್ಕಲ್, ಕಾರ್ಪೋರೇಷನ್ ಹಾಗೂ ಯಶವಂತಪುರ ಸೇರಿ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸಿದರು. ಏಕಾಏಕಿ ಸುರಿದ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಇತ್ತ ನೆಲಮಂಗಲ (Nelamangala) ತಾಲೂಕಿನ ಹಲವೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಮಳೆ ಇಲ್ಲದೆ ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಹಾನ ಸವಾರರ ಪರದಾಟ ಅನುಭವಿಸಿದರು. ಇನ್ನು ಧಾರಾಕಾರ ಮಳೆಗೆ ರಸ್ತೆಯ ಪಕ್ಕದಲ್ಲಿ ದ್ವಿಚಕ್ರ ಸವಾರರು ಆಶ್ರಯ ಪಡೆದರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]