– ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ
ಬೆಂಗಳೂರು: ನಗರದಲ್ಲಿ (Bengaluru Rains) ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿದಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಾಗಲಕೋಟೆ| ರಸ್ತೆಗಳಲ್ಲಿ ಶೌಚಗುಂಡಿ, ಒಳಚರಂಡಿ ತುಂಬಿ ಮನೆಗೆ ನುಗ್ಗುತ್ತಿವೆ ಕೊಳಚೆ ನೀರು
ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಮಳೆಯ ನಡುವೆಯೂ ಕಾರ್ಮಿಕರು ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸ್ಥಳಕ್ಕೆ ಸ್ಥಳೀಯ ಶಾಸಕ ಬೈರತಿ ಸುರೇಶ್ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ| ಮಳೆರಾಯನ ಅಟ್ಟಹಾಸಕ್ಕೆ 65 ಲಕ್ಷಕ್ಕೂ ಅಧಿಕ ಮೌಲ್ಯದ 25,000 ಕೋಳಿಗಳ ಮಾರಣಹೋಮ