ಬೆಂಗಳೂರು: ನಗರದಲ್ಲಿ ಬಿರುಗಾಳಿ, ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ (Heavy Rain) ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಎಚ್ಚರಿಸಿದೆ.
ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು ನಗರ (Bengaluru City), ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಮಂಡ್ಯ (Mandya) ಜಿಲ್ಲೆ ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗಲಿದೆ ಎಂದೂ ಹೇಳಿದೆ. ಈಗಾಗಲೇ ಮಳೆ ಆವರಿಸಿದ್ದು, ದಾಸರಹಳ್ಳಿ, ಮಲ್ಲಸಂದ್ರ, ಬಾಗಲಗುಂಟೆ ಸೇರಿದಂತೆ ಹಲವೆಡೆ ಕಳೆದ ಅರ್ಧ ಗಂಟೆಯಿಂದ ಮಳೆ ಸುರಿಯುತ್ತಿದೆ. ರಸ್ತೆ ಇಕ್ಕೆಲಗಳಲ್ಲಿ ನೀರು ತುಂಬಿಕೊಂಡಿದ್ದು, ಸಂಚಾರ ಅಸ್ತವ್ಯಸ್ಥಗೊಂಡಿದೆ. ಇದನ್ನೂ ಓದಿ: ಸೈಬರ್ ಕಳ್ಳರ ಕೈಚಳಕ – ಪೊಲೀಸ್ ಇಲಾಖೆ ಹೆಸರಿನಲ್ಲೇ ಫೇಕ್ ಫೇಸ್‍ಬುಕ್ ಅಕೌಂಟ್ ಸೃಷ್ಠಿ
Advertisement
Advertisement
ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿಯುತ್ತಿದ್ದು, ಸೋಮವಾರದಿಂದ (ಮೇ 29) ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಕರಾವಳಿ, ದಕ್ಷಿಣ ಒಳನಾಡಿನ ಕೆಲವಡೆ ಧಾರಾಕಾರ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರ ವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಗಾಬರಿ ಬೇಡ, ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿಕೆಶಿ
Advertisement
Advertisement
ಇನ್ನೂ ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.