ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಯಿಂದಾಗಿ ನಮ್ಮ ಮೆಟ್ರೋದ (Namma Metro) ಪರ್ಪಲ್ ಲೈನ್ (Purple Line) ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
ಗುರುವಾರ ಸಂಜೆ (ಮೇ 21, 2026) ಕಚೇರಿ ಬಿಡುವ ಪೀಕ್ ಅವರ್‌ನಲ್ಲಿ ಗಾಳಿ- ಮಳೆಯ ಆರ್ಭಟಕ್ಕೆ ಹೂಡಿ ನಿಲ್ದಾಣದ ಬಳಿ ಹಾಗೂ ಬೆನ್ನಿಗಾನಹಳ್ಳಿ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ಹಳಿಗಳ ಮೇಲೆ ಹತ್ತಿರದ ಕಟ್ಟಡಗಳ ಲೋಹದ ಶೀಟ್‌ಗಳು ಬಿದ್ದಿದ್ದವು. ಇದನ್ನೂ ಓದಿ: ಬೆಂಗಳೂರಿನ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ – ಆರೆಂಜ್ ಅಲರ್ಟ್ ಘೋಷಣೆ
🚇 ಸಾರ್ವಜನಿಕ ಮಾಹಿತಿಗಾಗಿ
ಭಾರಿ ಗಾಳಿ ಹಾಗೂ ಮಳೆಯಿಂದಾಗಿ ಎಲ್ಲಾ ಮೆಟ್ರೋ ಮಾರ್ಗಗಳ ಸೇವೆಯಲ್ಲಿ ವಿಳಂಬ ಉಂಟಾಗಿದೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆಯಾಗಿದೆ. ಪ್ರಯಾಣಿಕರ ಸಹಕಾರವನ್ನು ಕೋರಿದೆ. ಈ ಅನಾನುಕೂಲತೆಗೆ ವಿಷಾಧಿಸುತ್ತೇವೆ. @srivasrbmrccoi1— ನಮ್ಮ ಮೆಟ್ರೋ (@OfficialBMRCL) May 21, 2026
ವಿದ್ಯುತ್ ಸಂಪರ್ಕ ತೆಗೆದು ಕೆಲಸ ಮಾಡಿದ ಕಾರಣ ಎಂ.ಜಿ. ರಸ್ತೆಯಿಂದ ವೈಟ್‌ಫೀಲ್ಡ್ (ಕಾಡುಗೋಡಿ) ಮಾರ್ಗದ ನಡುವೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಹಳಿಗಳ ಮೇಲಿದ್ದ ವಸ್ತುಗಳನ್ನು ತೆರವುಗೊಳಿಸಲು ಬಿಎಂಆರ್‌ಸಿಎಲ್ (BMRCL) ಸಿಬ್ಬಂದಿ ಕಾರ್ಯಾಚರಣೆ ನಡೆಸಿದ ಕಾರಣ, ರೈಲುಗಳ ಸಂಚಾರ ಸುಮಾರು 45 ನಿಮಿಷಗಳ ಕಾಲ ತಡವಾಯಿತು.
ರೈಲುಗಳು ಸಮಯಕ್ಕೆ ಸರಿಯಾಗಿ ಬರದ ಕಾರಣ ಮೆಜೆಸ್ಟಿಕ್, ಇಂದಿರಾನಗರ ಸೇರಿದಂತೆ ಪರ್ಪಲ್ ಲೈನ್‌ನ ಪ್ರಮುಖ ನಿಲ್ದಾಣಗಳ ಪ್ಲಾಟ್‌ಫಾರ್ಮ್‌ಗಳು ಮತ್ತು ಕೋಚ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿ ಭಾರಿ ಜನದಟ್ಟಣೆ ಕಂಡುಬಂದಿದೆ.
ಹೊರಗಡೆ ರಸ್ತೆಗಳಲ್ಲಿ ಜಲಾವೃತಗೊಂಡು ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದರಿಂದ, ಜನರು ಮೆಟ್ರೋ ನಿಲ್ದಾಣಗಳತ್ತ ಮುಖ ಮಾಡಿದ್ದು ಜನದಟ್ಟಣೆ ಮತ್ತಷ್ಟು ಹೆಚ್ಚಾಗಲು ಕಾರಣವಾಯಿತು.
