ಬೆಂಗಳೂರಿನಲ್ಲಿ ಭಾರೀ ಮಳೆ – ಇಂದಿನಿಂದ ವಾರಪೂರ್ತಿ ಹಲವು ಕಡೆ ಬೀಳಲಿದೆ ಮಳೆ

Public TV
1 Min Read
rain bengaluru

ಬೆಂಗಳೂರು: ಸೋಮವಾರ ಸಂಜೆ ಬೆಂಗಳೂರಿನಲ್ಲಿ (Bengaluru) ಭಾರೀ ಮಳೆ (Rain) ಸುರಿದಿದೆ.

ಮಲ್ಲೇಶ್ವರಂ, ಯಶವಂತಪುರ ಭಾಗದಲ್ಲಿ ಜೋರಾಗಿ ಮಳೆಯಾಗಿದ್ದು ಸವಾರರು ವಾಹನ ಓಡಿಸಲು ಪರದಾಡಿದರು.

ಮುಂದಿನ ಒಂದು ವಾರಗಳ ಕಾಲ ರಾಜ್ಯದಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಈಗಾಗಲೇ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಚಂದನ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ‘ಸೀತಾ ವಲ್ಲಭ’ ನಟಿ

 

ಏಪ್ರಿಲ್ 14 ರಿಂದ 20ರವರೆಗೆ ರಾಜ್ಯದಲ್ಲಿ ವರುಣನ ಅಬ್ಬರವಿರಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಇದನ್ನೂ ಓದಿ: 4,500 ಎಕ್ರೆಗೆ ದಾಖಲೆ ಇದೆ, ಅರಮನೆ ಹೆಸರಿಗೆ ಜಮೀನು ಬಂದ್ರೂ ಗ್ರಾಮಸ್ಥರು ಆತಂಕ ಪಡಬೇಕಿಲ್ಲ: ಪ್ರಮೋದಾದೇವಿ ಒಡೆಯರ್

ಏಪ್ರಿಲ್‌ 15ರಂದು ಕರಾವಳಿ ಕರ್ನಾಟಕ ಭಾಗದಲ್ಲಿ ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ (Udupi) ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರುತ್ತದೆ.

ಉತ್ತರ ಒಳನಾಡಿನ ಕರ್ನಾಟಕದ ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.

Share This Article