Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ ಮಳೆ ಅವಾಂತರ – ಎಲ್ಲಿ ಏನಾಗಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ ಮಳೆ ಅವಾಂತರ – ಎಲ್ಲಿ ಏನಾಗಿದೆ?

Bengaluru City

ಬೆಂಗಳೂರಿನಲ್ಲಿ ಮಳೆ ಅವಾಂತರ – ಎಲ್ಲಿ ಏನಾಗಿದೆ?

Public TV
Last updated: October 21, 2024 10:34 am
Public TV
Share
2 Min Read
bengaluru rain 5
SHARE

ಬೆಂಗಳೂರು: ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿ ಮಂದಿ ತತ್ತರಿಸಿದ್ದಾರೆ. ಗುಡುಗು ಸಹಿತ ಸುರಿದ ಭಾರೀ ಮಳೆಗೆ ಬೆಂಗಳೂರಿನ (Bengaluru) ಹಲವೆಡೆ ನಾನಾ ಅವಾಂತರಗಳು ಸೃಷ್ಟಿಯಾಗಿದೆ.

ಕೆಂಗೇರಿ (Kengeri), ಆರ್ ಆರ್ ನಗರ, ದಾಸರಹಳ್ಳಿ ಭಾಗದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿತ್ತು. ಅದೇ ರೀತಿ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲೂ ಮಳೆ ನೀರು ಮನೆಗಳಿಗೆ ನುಗ್ಗಿದ್ದು, ಇಲ್ಲಿನ ಜನ ಜಲ ದಿಗ್ಬಂಧನದಲ್ಲಿದ್ದಾರೆ. ಇಡೀ ರಸ್ತೆ ನೀರಿನಿಂದ ತುಂಬಿರುವ ಕಾರಣ ಇದೇ ರಸ್ತೆಯಲ್ಲಿರೋ ಮನೆಗಳಿಗೆ ಹೋಗುವವರು, ಬರುವವರು ಬೇರೆ ಪರ್ಯಾಯ ಮಾರ್ಗವಿಲ್ಲದೇ ಕೊಳಚೆ ನೀರಿನಲ್ಲೇ ಓಡಾಟ ಮಾಡುತ್ತಿದ್ದಾರೆ. ಇದನ್ನೂ ಓದಿ: ಧಾರವಾಡ| ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳಗಳು

ಇತಿಹಾಸ ಪುರಾಣ ಪ್ರಸಿದ್ಧ ಗಾಳಿ ಆಂಜನೇಯ ದೇವಾಲಯಕ್ಕೂ ಜಲ ಕಂಟಕ ಶುರುವಾಗಿ ಅದೆಷ್ಟೋ ವರ್ಷಗಳೇ ಕಳೆದಿದೆ. ಮಳೆ ಬಂದರೆ ಸಾಕು ದೇವಾಲಯದ ಆವರಣಕ್ಕೂ ಮಳೆ ನೀರು ರಾಜಕಾಲುವೆ ನೀರು ಹರಿದು ಬರುತ್ತಿದೆ. ಭಾನುವಾರ ಸುರಿದ ಮಳೆಗೂ ದೇವಾಲಯ ಹೊರ ಭಾಗ ಜಲವೃತವಾಗಿದ್ದು, ಮಳೆ ನಿಂತರೂ ದೇವಾಲಯದ ಹೊರ ಭಾಗದ ಮುಖ್ಯ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರಿಗೂ ಸಮಸ್ಯೆ ಆಗುತ್ತಿದೆ. ಇದನ್ನೂ ಓದಿ: ಪ್ರತೀಕಾರಕ್ಕೆ ಕೃತ್ಯ ಎಂದು ಪೋಸ್ಟ್‌ – ದೆಹಲಿ ಸ್ಫೋಟಕ್ಕೆ ಖಲಿಸ್ತಾನಿ ನಂಟು, ತನಿಖೆ ಆರಂಭ

ಓಕಳಿಪುರಂ ಅಂಡರ್ ಪಾಸ್ ಕೆರೆಯಂತೆ ಆಗಿದ್ದು, ಎರಡು ಅಡಿಯಷ್ಟು ನೀರು ನಿಂತು ವಾಹನ ಸವಾರರು ಪರದಾಡಿದ್ದಾರೆ. ಜೆಜೆ ಆರ್ ನಗರದ ವಿಎಸ್ ಗಾರ್ಡನ್‌ನಲ್ಲಿ ಮೋರಿ ತಡೆಗೋಡೆ ಕುಸಿತಗೊಂಡು 10 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಮುಂಜಾನೆಯಿಂದಲೂ ಸುರಿಯುತ್ತಿರುವ ಮಳೆ ಹಿನ್ನೆಲೆ ಸರ್ಜಾಪುರ ಆರ್‌ಜಿಬಿ ಟೆಕ್ ಪಾರ್ಕ್ ಎದುರು ಜಲಾವೃತಗೊಂಡಿದೆ. ಬಿಬಿಎಂಪಿ ಗ್ರಾಮಪಂಚಾಯತ್ ಬಾರ್ಡರ್‌ನಲ್ಲಿ ಬರುವ ಆರ್‌ಜಿಬಿ ಟೆಕ್ ಪಾರ್ಕ್ ಸಮೀಪದ ರೈಲ್ವೆ ಮಾರ್ಗದ ಬಳಿ ನೀರು ಹರಿಯಲು ಸರಿಯಾದ ವ್ಯವಸ್ಥೆ ಇಲ್ಲದಿರುವ ಕಾರಣ ನೀರು ನಿಲ್ಲುತ್ತಿದೆ. ಪದೇ ಪದೇ ಜಲಾವೃತವಾಗುತ್ತಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ.

ಬೆಳ್ಳಂದೂರು ಕೆರೆ ಪಕ್ಕದಲ್ಲಿರೋ ಸಕ್ರ ಆಸ್ಪತ್ರೆಯ ರಸ್ತೆ ಕೆರೆಯಂತಾಗಿದೆ. ಇಡೀ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಆಗುತ್ತಿದೆ. ವಿಲ್ಸನ್ ಗಾರ್ಡನ್ ಬಿಟಿಎಸ್ ಮುಖ್ಯ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಲ್ಯಾವಲಿ ರೋಡ್ ಹುಲ್‌ಕುಲ್ ರೆಸಿಡೆನ್ಸಿ 36 ಫ್ಲಾಟ್ ಇರುವ ಅಪಾರ್ಟ್ಮೆಂಟ್ ಕೆಳಭಾಗ ಸಂಪೂರ್ಣ ನೀರು ತುಂಬಿದೆ. ಇದನ್ನೂ ಓದಿ: ರಾಯಚೂರು| ಸಾರಿಗೆ ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು – ಚಾಲಕ ಪರಾರಿ

ನಾಗದೇನಹಳ್ಳಿಯಲ್ಲಿ ಮುಂದುವರೆದ ಮಳೆಯಿಂದ ಕೆರೆ ನೀರು ಹಳ್ಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಹೆಬ್ಬಾಳ ಸುತ್ತಮುತ್ತ ಸಂಚಾರ ದಟ್ಟಣೆಯಾಗಿದ್ದು, ಕೆಲಸ ಕಾರ್ಯಕ್ಕೆ ಹೋಗುವ ವಾಹನ ಸವಾರರು ಟ್ರಾಫಿಕ್ ಜಾಮ್‌ನಲ್ಲಿ ಲಾಕ್ ಆಗಿದ್ದಾರೆ. ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್ ಹಾಗೂ ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತವಾಗಿದೆ. ಇದನ್ನೂ ಓದಿ: ಮಂಡ್ಯ| ಈಜು ಬಾರದೇ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

TAGGED:bengalurukarnatakarainweatherಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Vanchanananda Sri
Davanagere

ಪೀಠಕ್ಕೆ ಬರುವ ಗುರುಕಾಣಿಕೆ ಶ್ವಾಸಕೇಂದ್ರಕ್ಕೆ ವರ್ಗಾವಣೆ – ವಂಚನಾನಂದ ಶ್ರೀಗಳ ಉಚ್ಚಾಟನೆ ಟ್ರಸ್ಟ್‌ ಕೊಟ್ಟ 10 ಕಾರಣಗಳೇನು?

Public TV
By Public TV
29 minutes ago
Vande Bharat Train
Belgaum

ಪ್ರಹ್ಲಾದ್ ಜೋಶಿ ಮನವಿಗೆ ಮನ್ನಣೆ; ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಕೇಂದ್ರ ಅಸ್ತು

Public TV
By Public TV
52 minutes ago
Indian Origin Techie Drown in US Waterfall
Crime

ಹುಟ್ಟುಹಬ್ಬದಂದೇ ಅಮೆರಿಕದ ಜಲಪಾತದಲ್ಲಿ ಮುಳುಗಿ ಭಾರತ ಮೂಲದ ಟೆಕ್ಕಿ ಸಾವು

Public TV
By Public TV
56 minutes ago
SSLC Exams
Bengaluru City

SSLC ಪರೀಕ್ಷೆಗೆ 525 ಅಂಕ – ಕರಡು ಅಧಿಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ

Public TV
By Public TV
1 hour ago
Jasprit Bumrah Mumbai Indians IPL
Cricket

114 ಎಸೆತ ಹಾಕಿಯೂ ವಿಕೆಟ್‌ ಪಡೆಯದ ಬುಮ್ರಾ

Public TV
By Public TV
1 hour ago
kea
Bengaluru City

ಪಿಯುಸಿ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣನೆ: ಕೆಇಎ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?