ಬೀದರ್: ಜಿಲ್ಲೆಯಲ್ಲಿ ಸತತ ಒಂದು ಗಂಟೆಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಬಿತ್ತನೆಗಾಗಿ ಕಾದು ಕುಳಿತಿದ್ದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಸತತ ಒಂದು ಗಂಟೆಯಿಂದ ಸಿಡಲು, ಗುಡುಗು ಸಹಿತ ಧಾರಕಾರ ಮಳೆಯಾಗುತ್ತಿದೆ. ಒಂದೆಡೆ ಬಿಸಿಲಿನಿಂದ ಕಂಗ್ಗೆಟ್ಟಿದ್ದ ಜಿಲ್ಲೆಯ ಜನರಿಗೆ ಮಳೆರಾಯ ತಂಪೆರೆದರೆ, ಇನ್ನೊಂದೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಬೆಳಿಗ್ಗೆಯಿಂದ ದಟ್ಟ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು ಪ್ರವಾಸಿತಾಣಗಳಲ್ಲಿ ಜನ ಜಾತ್ರೆ – ಸೀತಾಳಯ್ಯನಗಿರಿ ಬಳಿ ಟ್ರಾಫಿಕ್‌ನಲ್ಲಿ ಸಿಲುಕಿದ ಸಾವಿರಾರು ಕಾರುಗಳು
ಬೀದರ್, ಔರಾದ್, ಭಾಲ್ಕಿ, ಹುಮ್ನಾಬಾದ್, ಚಿಟ್ಟಗುಪ್ಪ, ಬಸವಕಲ್ಯಾಣ ಸೇರಿದಂತೆ ಜಿಲ್ಲೆಯಾದ್ಯಂತ ಮಳೆಯಾಗಿದ್ದು, ಹವಾಮಾನ ಇಲಾಖೆಯ ಪ್ರಕಾರ ಇಂದು, ನಾಳೆ (ಜೂ.28) ಭಾರಿ ಮಳೆಯಾಗುವ ಸಾಧ್ಯತೆಯಿದೆ.
