ಬೀದರ್: ತಡರಾತ್ರಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಬೀದರ್ (Bidar) ಜಿಲ್ಲೆಯಾದ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಬೃಹತ್ ಗಾತ್ರದ ಮರಗಳು ನೆಲ ಕಚ್ಚಿವೆ, ವಿದ್ಯುತ್ ತಂತಿಗಳು ಧರೆಗುರುಳಿವೆ. ಇದರಿಂದ ಹಲವೆಡೆ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಬೀದರ್‌ನಲ್ಲಿ ಎಲ್ಲೆಲ್ಲಿ ಮಳೆ?
ಬೀದರ್ ನಗರ, ಔರಾದ್, ಕಮಲನಗರ ಸೇರಿ ಜಿಲ್ಲೆಯ ಹಲವೆಡೆ ಮಳೆ (Heavy Rain) ಸುರಿದಿದ್ದು ಔರಾದ್ ಪಟ್ಟಣ ಸೇರಿ ಸಂತಪುರ, ಚಿಂತಾಕಿ, ವಡಗಾವ್ ಹೋಬಳಿ ಮತ್ತು ಮಲನಗರ ತಾಲೂಕಿನ ಮದನೂರ, ಖತಗಾಂವ, ಮೂರ್ಕಿ ಸೇರಿ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು ಅವಾಂತರ ಸೃಷ್ಟಿಯಾಗಿದೆ. ಇದನ್ನೂ ಓದಿ: ಲಾಡ್ಜ್‌ಗಳಲ್ಲಿ ತಂಗಲು ಕಲಬುರಗಿ ಯುವಕನ ಆಧಾರ್ ನಕಲು ಮಾಡಿದ್ದ ಬಾಂಬರ್; ಸ್ಫೋಟಕ ರಹಸ್ಯ ಬಯಲು
Advertisement
Advertisement
ಬಿರುಗಾಳಿ ಸಹಿತ ಸುರಿದ ಮಳೆಗೆ ಕಮಲನಗರದ ರೈಲ್ವೆ ನಿಲ್ದಾಣದಲ್ಲಿ ಬೃಹತ್ ಮರ ನೆಲಕ್ಕುರುಳಿದ್ದು ಮದನೂರ ಗ್ರಾಮದಲ್ಲಿ ವಿದ್ಯುತ್ ತಂತಿಗಳು ಹರಿದು ಬಿದ್ದಿದ್ದರಿಂದ ಹಲವು ಗಂಟೆಗಳ ಕಾಲ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಅಲ್ಲದೇ ಕೆಲ ಮನೆಯ ಸೀಟುಗಳು ಹಾರಿ ದಿನಬಳಕೆ ವಸ್ತುಗಳೆಲ್ಲ ಹಾನಿಯಾಗಿವೆ. ಸದ್ಯ ಬೀದರ್‌ನಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದೆ.
Advertisement
ಯಾವ ದಿನ..ಎಲ್ಲೆಲ್ಲಿ ಮಳೆ ಮುನ್ಸೂಚನೆ?:
* ಏ.13 (ಇಂದು): ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ದಾವಣಗೆರ , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ತುಮಕೂರು, ಮಂಡ್ಯ. ಇದನ್ನೂ ಓದಿ: ರಾಜಸ್ಥಾನದಲ್ಲಿ ಕಾಂಗ್ರೆಸ್ ತೊರೆದ 400 ಕಾರ್ಯಕರ್ತರು
Advertisement
* ಏ.14: ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್ ಗದಗ, ಕಲ್ಬುರ್ಗಿ ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ.
* ಏ.15: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಚಿತ್ರದುರ್ಗಾ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.