ಚಿಕ್ಕಮಗಳೂರು: ಕಳೆದೊಂದು ತಿಂಗಳಿಂದ ಕಾಫಿನಾಡಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರೋ ಧಾರಾಕಾರ ಮಳೆಗೆ ಜನಜೀವನ ತತ್ತರಿಸಿ ಹೋಗಿದೆ.
ಶೃಂಗೇರಿ, ಮೂಡಿಗೆರೆ, ಕಳಸ, ಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಕುದುರೆಮುಖ ಸೇರಿದಂತೆ ಅನೇಕ ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗಿದ್ರೆ, ಇತ್ತ ಅತಿವೃಷ್ಠಿಯಿಂದ ಅಡಿಕೆ, ಕಾಫಿ, ಮೆಣಸು ಬೆಳೆಗಾರರು ಹಾಗೂ ರೈತರು ಬೀದಿಗೆ ಬೀಳುವಂತಾಗಿದೆ.
Advertisement
ಭಾರೀ ಮಳೆ-ಗಾಳಿಗೆ ಮಲೆನಾಡಿನ ಪ್ರಮುಖ ಬೆಳೆಯಾಗಿರೋ ಕಾಫಿ, ಅಡಿಕೆ, ಮೆಣಸು, ಭತ್ತ ಸೇರಿದಂತೆ ಅನೇಕ ಬೆಳೆಗಳು ನಾಶವಾಗಿವೆ. ಗಾಳಿ ಸಹಿತ ಮಳೆಯಾಗುತ್ತಿರೋದ್ರಿಂದ ಕಾಫಿ, ಮೆಣಸು ಹಾಗೂ ಅಡಿಕೆ ನೆಲಕಂಡಿದೆ. ಶೃಂಗೇರಿ, ಮೂಡಿಗೆರೆ, ಕೊಪ್ಪ ಹಾಗೂ ಎನ್.ಆರ್.ಪುರ ತಾಲೂಕಿನಾದ್ಯಂತ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.
Advertisement
ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಭತ್ತ ಬೆಳೆಯುತ್ತಿದ್ದು, ನದಿ ಪಾತ್ರದಲ್ಲಿರೋ ಭತ್ತದ ಗದ್ದೆಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತವಾಗಿವೆ. ಜಿಲ್ಲಾಡಳಿತ ಹಾಗೂ ಸರ್ಕಾರ ಶೀಘ್ರವೇ ಬೆಳೆ ಹಾನಿಯಾಗಿರೋ ಪ್ರದೇಶಕ್ಕೆ ಭೇಟಿ ನೀಡಿ ರೈತರ ಹಾಗೂ ಬೆಳೆಗಾರರ ನೆರವಿಗೆ ಧಾವಿಸಬೇಕೆಂದು ಸ್ಥಳೀಯರು ಒತ್ತಾಯಿಸ್ತಿದ್ದಾರೆ.