Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ – ನೀರಲ್ಲಿ ಕೊಚ್ಚಿ ಹೋದ 1ನೇ ತರಗತಿ ಬಾಲಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ – ನೀರಲ್ಲಿ ಕೊಚ್ಚಿ ಹೋದ 1ನೇ ತರಗತಿ ಬಾಲಕಿ

Chikkamagaluru

ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ – ನೀರಲ್ಲಿ ಕೊಚ್ಚಿ ಹೋದ 1ನೇ ತರಗತಿ ಬಾಲಕಿ

Public TV
Last updated: July 5, 2022 8:45 am
Public TV
Share
3 Min Read
chikkamagaluru girl
SHARE

ಚಿಕ್ಕಮಗಳೂರು: ಕಾಲು ಕೆಸರಾಗಿದೆ ಎಂದು ಕಾಲು ತೊಳೆದುಕೊಳ್ಳಲು ಹಳ್ಳಕ್ಕೆ ಇಳಿದಿದ್ದ 1ನೇ ತರಗತಿಯ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ. ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿಯನ್ನು ಸುಪ್ರಿತಾ(6) ಎಂದು ಗುರುತಿಸಲಾಗಿದೆ.

ಸುಪ್ರಿತಾ ತನ್ನ ಅಣ್ಣನ ಜೊತೆ ಶಾಲೆ ಮುಗಿಸಿಕೊಂಡು ಮನೆಗೆ ಬರುತ್ತಿದ್ದಾಗ ಕಾಲು ಕೆಸರಾಯಿತು ಎಂದು ಅಣ್ಣ-ತಂಗಿ ಇಬ್ಬರೂ ಹಳ್ಳದಲ್ಲಿ ಕಾಲು ತೊಳೆದುಕೊಳ್ಳಲು ಹೋಗಿದ್ದರು. ಆ ವೇಳೆ ಸುಪ್ರಿತಾ ನೀರಲ್ಲಿ ಕೊಚ್ಚಿ ಹೋಗಿದ್ದಾಳೆ.

chikkamagaluru rain

ಕಳೆದೊಂದು ವಾರದಿಂದ ಆರೋಗ್ಯ ಸರಿ ಇಲ್ಲ ಎಂದು ಶಾಲೆಗೆ ಹೋಗಿರದ ಬಾಲಕಿ ಸೋಮವಾರ ಶಾಲೆಗೆ ಹೋಗಿದ್ದಳು. ಆದರೆ, ಸಂಜೆ ಮನೆಗೆ ಬರುವಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ. ವಿಷಯ ತಿಳಿದ ಕೂಡಲೇ ಸ್ಥಳೀಯರು ಬಾಲಕಿಯನ್ನು ಹುಡುಕುವ ಪ್ರಯತ್ನ ಮಾಡಿದ್ದಾರೆ. ಆದರೆ, ಬಾಲಕಿ ಪತ್ತೆಯಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿದ್ದರು. ಸ್ಥಳೀಯರು ಜೊತೆ ಅಧಿಕಾರಿಗಳು ಕೂಡ ನೀರಿನಲ್ಲಿ ಧುಮುಕಿ ಹರಿಯುವ ಹಳ್ಳದಲ್ಲಿ ಬಾಲಕಿಯನ್ನು ಹುಡುಕುವ ಪ್ರಯತ್ನ ಮಾಡಿದ್ದರು. ಆದರೂ ಬಾಲಕಿ ಪತ್ತೆಯಾಗಲಿಲ್ಲ.

ಅಗ್ನಿ ಶಾಮಕ ಸಿಬ್ಬಂದಿ ಬಳಿಕ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ವೇಗವಾಗಿ ಹರಿಯುವ ಹಳ್ಳದಲ್ಲಿ ಇಳಿದು ಬಾಲಕಿಗಾಗಿ ಹುಡುಕಾಡಿದರೂ ಆಕೆ ಪತ್ತೆಯಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬೋಟ್ ಕೂಡ ಕೊಂಡೊಯ್ದಿದ್ದರು. ಆದರೆ, ಗುಡ್ಡಗಾಡು ಪ್ರದೇಶದಲ್ಲಿ ಹರಿಯುವ ನೀರಾಗಿರುವುದರಿಂದ ತಗ್ಗು-ದಿಬ್ಬ ಇರುವುದರಿಂದ ಬೋಟ್ ಹಾಕಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾಲಕಿಯನ್ನು ಹುಡುಕಾಡಿದರು. ಆದರೆ, ಮಳೆ ಹಾಗೂ ಕತ್ತಲು ಹೆಚ್ಚಾದ ಕಾರಣ ಅಧಿಕಾರಿಗಳು ಹಾಗೂ ಸ್ಥಳೀಯರು ತಾತ್ಕಾಲಿಕವಾಗಿ ಕಾರ್ಯಾಚರಣೆಯನ್ನು ಕೈಬಿಟ್ಟಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ತಗ್ಗಿದ ಮಳೆಯ ಆರ್ಭಟ

chikkamagluru rain

ಸಿಬ್ಬಂದಿ ಮಂಗಳವಾರ ಬೆಳಗ್ಗೆ ಮತ್ತೆ ಕಾರ್ಯಾಚರಣೆ ಮುಂದುವರೆಸಲಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕ ಡಿಎಫ್‌ಒ ಶಶಿಧರ್, ಚಿಕ್ಕಮಗಳೂರು ತಹಶೀಲ್ದಾರ್ ಕೂಡ ಮೊಕ್ಕಾಂ ಹೂಡಿದ್ದಾರೆ. ಬಾಲಕಿ ನಾಪತ್ತೆಯಾಗಿದ್ದರಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಶಾಲೆ ಹಾಗೂ ಗ್ರಾಮದಲ್ಲೂ ನೀರವ ಮೌನ ಆವರಿಸಿದೆ. ವಿಷಯ ತಿಳಿದು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಸ್ಥಳಕ್ಕೆ ಬಂದು ಬಾಲಕಿಯನ್ನು ಹುಡುಕಾಡುವ ಪ್ರಯತ್ನ ಮಾಡಿದ್ದಾರೆ.

ಶಾಲಾ-ಕಾಲೇಜುಗಳಿಗೆ ರಜೆ:
ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿ-ಹಳ್ಳ-ಕೊಳ್ಳ-ತೊರೆಗಳು ಮೈದುಂಬಿ ಹರಿಯುತ್ತಿವೆ. ಈ ಹಿನ್ನೆಲೆ ಜಿಲ್ಲಾಡಳಿತ ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಮಲೆನಾಡು ಭಾಗದ 3 ತಾಲೂಕಿಗೆ ರಜೆ ಘೋಷಿಸಿದೆ. ಜಿಲ್ಲೆಯ ಕಳಸ ಹಾಗೂ ಶೃಂಗೇರಿ ತಾಲೂಕಿನ ಎಲ್ಲಾ ಶಾಲೆಗಳು ಹಾಗೂ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ರಜೆ ನೀಡಲು ಆದೇಶಿಸಿದೆ.

chikkamagaluru rain 1

ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದ ಕಳಸ ತಾಲೂಕಿನ ಕುದುರೆಮುಖದ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಭದ್ರೆಯ ಅಬ್ಬರ ಜೋರಿರುವ ಕಾರಣ ಕಳಸ-ಹೊರನಾಡು ಸಂಪರ್ಕ ಸೇತುವೆ ಹೆಬ್ಬಾಳೆ ಸಂಪೂರ್ಣ ಜಲಾವೃತಗೊಂಡಿದೆ. ಸುಮಾರು 1 ಗಂಟೆಗೂ ಅಧಿಕ ಕಾಲ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ವಾಹನಗಳು ನಿಂತಲ್ಲೇ ನಿಂತು ಪರದಾಡಬೇಕಾಯ್ತು.

ಶೃಂಗೇರಿ ತಾಲೂಕಿನ ಕೆರೆಕಟ್ಟೆ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ತುಂಗಾ ನದಿ ಕೂಡ ಮೈದುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತುಂಗಾ ನದಿಯ ಅಬ್ಬರ ಜೋರಾಗಿದ್ದು ತುಂಗೆಯ ನೀರು ಶೃಂಗೇರಿ ದೇವಸ್ಥಾನದ ವಾಹನಗಳ ಪಾರ್ಕಿಂಗ್ ಜಾಗ ಪ್ರವೇಶಿಸಿತ್ತು. ಪಾರ್ಕಿಂಗ್ ಜಾಗಕ್ಕೆ ಹೋಗುವ ಮಾರ್ಗ ಕೂಡ ಮಳೆ ನೀರಿನಿಂದ ಸಂಪೂರ್ಣ ಜಲಾವೃತಗೊಂಡಿತ್ತು. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

chikkamagaluru rain 3

ಮೂಡಿಗೆರೆ, ಕೊಪ್ಪ ಹಾಗೂ ಎನ್.ಆರ್.ಪುರ ತಾಲೂಕಿನಲ್ಲೂ ಮಳೆ ಅಬ್ಬರ ಮುಂದುವರೆದಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹೀಗಾಗಿ, ಜಿಲ್ಲೆಯ ಮಲೆನಾಡಿನಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಕಾರಣ ಅಲ್ಲಿನ ಗ್ರಾಮೀಣ ಭಾಗದ ಮಕ್ಕಳು ಶಾಲೆಗೆ ಬರುವುದು ಕಷ್ಟವೆಂದು ಜಿಲ್ಲಾಡಳಿತ ಮುಂಜಾಗೃತ ಕ್ರಮವಾಗಿ 3 ತಾಲೂಕಿನ ಶಾಲೆಗಳಿಗೆ ರಜೆ ನೀಡಿ ಆದೇಶಿಸಿದೆ.

Live Tv
[brid partner=56869869 player=32851 video=960834 autoplay=true]

TAGGED:Chikkamagalurugirlrainಚಿಕ್ಕಮಗಳೂರುಬಾಲಕಿಮಳೆ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

yathindra siddaramaiah
Districts

ನಮ್ಮ ತಂದೆಯೇ 5 ವರ್ಷ ಸಿಎಂ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಯತೀಂದ್ರ

Public TV
By Public TV
4 minutes ago
Yogesh Gowda murder case Vinay Kulkarni likely to lose MLA seat Bengaluru Court
Bengaluru City

ವಿನಯ್‌ ಕುಲಕರ್ಣಿ ಶಾಸಕ ಸ್ಥಾನಕ್ಕೆ ಕುತ್ತು?

Public TV
By Public TV
7 minutes ago
Vinay Kulkarni
Bengaluru City

ಯೋಗೇಶ್‌ ಗೌಡ ಹತ್ಯೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ

Public TV
By Public TV
35 minutes ago
Davanagere CPI Death In Car Accident
Crime

ಮರಕ್ಕೆ ಕಾರು ಡಿಕ್ಕಿ – ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು

Public TV
By Public TV
45 minutes ago
Pawan Khera
Court

ʻಕೈʼ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ ಶಾಕ್ – ತೆಲಂಗಾಣ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನಿಗೆ ತಡೆ

Public TV
By Public TV
2 hours ago
Afreen Khan
Bengaluru City

ನಾನು ಏ.4ಕ್ಕೆ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ- ಉಚ್ಚಾಟನೆ ನಿರ್ಧಾರಕ್ಕೆ ಸಿಲ್ಲಿ ಎಂದ ಆಫ್ರೀನ್ ಖಾನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?