ಚಿಕ್ಕಮಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
ಬಿಸಿಲಿನಿಂದಾಗಿ ಕಾದ ಕಾವಲಿಯಂತಾಗಿದ್ದ ಕಾಫಿನಾಡಿಗೆ ಕೊನೆಗೂ ವರುಣದೇವ (Rain, Chikkamagaluru) ಕರುಣೆ ತೋರಿದ್ದಾನೆ. ಕಳೆದೊಂದು ಗಂಟೆಯಿಂದ ಆಲಿಕಲ್ಲು ಸಹಿತ ಭಾರೀ ಮಳೆಯಾಗುತ್ತಿದೆ. ರಸ್ತೆಯಲ್ಲಿ ಅರ್ಧ ಅಡಿ ಎತ್ತರದಲ್ಲಿ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡಿದ್ದಾರೆ.
41 ಡಿಗ್ರಿ ತಲುಪುತ್ತಿದ್ದ ಬಿಸಿಲ ತಾಪಮಾನಕ್ಕೆ ಜನ ಹೈರಾಣಾಗಿದ್ದರು. ಇದೀಗ ಧಾರಾಕಾರ ಮಳೆ ಕಂಡು ರೈತರು, ಕಾಫಿ ಬೆಳೆಗಾರರ ಸಂತಸಗೊಂಡಿದ್ದಾರೆ. ಇದನ್ನೂ ಓದಿ: ವೀಡಿಯೋ: ಕಾಲಿನ ಮೂಲಕ ಮತಚಲಾಯಿಸಿ ಮಾದರಿಯಾದ ಯುವಕ!
ಸೋಮವಾರ ಸಂಜೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಿತ್ತು. ಬೆಂಗಳೂರಿನ ಕೆಲವು ಕಡೆಗಳಲ್ಲಿ ಆಲಿಕಲ್ಲು ಸಹಿತ ಭರ್ಜರಿ ಮಳೆಯಾಗಿದೆ. ಇನ್ನೂ ಕೆಲವೆಡೆ ಮರಗಳು ಬಿದ್ದು ಹಾನಿಯಾಗಿತ್ತು.