ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ಥವ್ಯಸ್ಥಗೊಂಡು ನೆರೆಯ ಭೀತಿ ಸೃಷ್ಟಿಯಾಗಿದೆ.
ಕರಾವಳಿ ಭಾಗಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ನೆರೆಯ ಭೀತಿ ಎದುರಾಗಿದೆ. ನದಿಗಳು ಮೈದುಂಬಿ ಹರಿಯುತ್ತಿದ್ದು, ಹಳ್ಳಕೊಳ್ಳಗಳು ಸಹ ತುಂಬಿ ಹೋಗಿವೆ. ಇದರಿಂದ ಕಿಂಡಿ ಅಣೆಕಟ್ಟು ಸಂಪೂರ್ಣ ತುಂಬಿ ತುಳುಕುತ್ತಿದೆ.
Advertisement
ಜಿಲ್ಲೆಯಲ್ಲಿ ಇನ್ನು ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕಿಳಿಯಬಾರದೆಂದು ಎಚ್ಚರಿಕೆ ನೀಡಲಾಗಿದೆ. ಕುಂದಾಪುರ, ಕಾರ್ಕಳ, ಕೊಲ್ಲೂರು ಹಾಗೂ ಬೈಂದೂರಿನಲ್ಲಿಯೂ ಮಳೆ ತನ್ನ ಆರ್ಭಟ ಮುಂದುವರೆಸಿದ್ದು, ಸಮುದ್ರ ಹಾಗೂ ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಸೂಚಿಸಿದೆ.