ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (ಆ.29) ರೆಡ್ ಅಲರ್ಟ್ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅಂಗನವಾಡಿಯಿಂದ ದ್ವಿತೀಯ ಪಿಯುಸಿ ವರೆಗೆ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹೆಚ್.ವಿ.ದರ್ಶನ್ ತಿಳಿಸಿದ್ದಾರೆ.
ಜಿಲ್ಲೆಯ ಹಲವೆಡೆ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಸೆ.2 ರ ವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.