Dakshina KannadaDistrictsKarnatakaLatestLeading NewsMain Post
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

Advertisements
ಮಂಗಳೂರು: ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆ ಮುಂದುವರಿದಿದ್ದು, ಇಂದು ಕೂಡ ಹವಮಾನ ಇಲಾಖೆ ದ.ಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ತೋರಿಸಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಯಿಂದ ಡಿಗ್ರಿ ಕಾಲೇಜ್‍ನ ಎಲ್ಲಾ ಸರ್ಕಾರಿ, ಖಾಸಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ತಿಳಿಸಿದರು.
ಬೆಳ್ತಂಗಡಿ ತಾಲೂಕಿನಾದ್ಯಂತ ಭಾನುವಾರ ರಾತ್ರಿ ಇಡೀ ಮಳೆಯಾಗಿದ್ದರಿಂದ ಭಾರೀ ಮಳೆಯಾಗುವ ಮುನ್ಸೂಚನೆ ಇತ್ತು. ಹೀಗಾಗಿ ಸೋಮವಾರವು ಬೆಳ್ತಂಗಡಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ರಜೆ ಘೋಷಣೆ ಮಾಡಿದ್ದರು. ಇದನ್ನೂ ಓದಿ: ಭಾರೀ ಮಳೆಗೆ ಕಳಸ, ಹೊರನಾಡು ಸಂಪರ್ಕ ಕಡಿತ – ಬೆಳ್ತಂಗಡಿ ಶಾಲಾ, ಕಾಲೇಜುಗಳಿಗೆ ರಜೆ