ನವದೆಹಲಿ: ರಾಜಧಾನಿ ದೆಹಲಿಯಲ್ಲಿ(Delhi) ಭಾನುವಾರ ಸುರಿದ ಭಾರೀ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದ 15 ವಿಮಾನಗಳ(Flight Diversion) ಮಾರ್ಗವನ್ನು ಬದಲಾಯಿಸಲಾಗಿದೆ.
10 ದೇಶೀಯ ಮತ್ತು 5 ಅಂತರರಾಷ್ಟ್ರೀಯ ವಿಮಾನಗಳನ್ನು ಜೈಪುರ ಹಾಗೂ ಲಕ್ನೋ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ. ಭಾರೀ ಮಳೆಯ ಕಾರಣ ದೆಹಲಿ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಕಾರ್ಯಾಚರಣೆ ವ್ಯತ್ಯಯಗೊಂಡಿದೆ.
ದೆಹಲಿಯಲ್ಲಿ ಮಧ್ಯಾಹ್ನದವರೆಗೆ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದ್ದು, ದಿನವಿಡೀ ಗುಡುಗು ಸಹಿತ ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ನಗರದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.
ಮುಂದಿನ ಎರಡು ದಿನಗಳಲ್ಲಿ ದೆಹಲಿಯ ತಾಪಮಾನ ಇನ್ನೂ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.ಇದನ್ನೂ ಓದಿ: ಚಿನ್ನ, ನಗದು ದೋಚಿ ಮಹಿಳೆಯನ್ನು ಬಾವಿಗೆ ತಳ್ಳಿದ ದುಷ್ಕರ್ಮಿ – 21 ಗಂಟೆ ಬಳಿಕ ರಕ್ಷಣೆ
ನೈಋತ್ಯ ಮುಂಗಾರು ಹರಿಯಾಣ, ಪಂಜಾಬ್ ಮತ್ತು ರಾಜಸ್ಥಾನದ ಉಳಿದ ಭಾಗಗಳಿಗೆ ಮುಂದುವರಿಯುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶದ ಹಲವು ಜಿಲ್ಲೆಗಳಲ್ಲೂ ಮಳೆಯ ಆರ್ಭಟ ಮುಂದುವರಿದಿದ್ದು, ಮಂಡಿ, ಸಿರ್ಮೌರ್, ಚಂಬಾ ಮತ್ತು ಕಾಂಗ್ರಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.ಇದನ್ನೂ ಓದಿ: ಮದುವೆಯಾಗಿ 2 ತಿಂಗಳಲ್ಲೇ ನವವಿವಾಹಿತೆ ಅನುಮಾನಾಸ್ಪದ ಸಾವು; ವರದಕ್ಷಿಣೆ ಕಿರುಕುಳ ಶಂಕೆ
