ಧಾರವಾಡ: ನಗರದಲ್ಲಿ ಭಾರೀ ಗಾಳಿ ಸಹಿತ ಮಳೆಗೆ ಆಂಜನೇಯನ ದೇವಸ್ಥಾನದ (Anjaneya Temple) ಮೇಲೆ ಮರ ಬಿದ್ದ ಘಟನೆ ನಡೆದಿದೆ.
ಧಾರವಾಡ (Dharwad) ಹೊರವಲಯದ ಹೊಯ್ಸಳನಗರದಲ್ಲಿ ಈ ಘಟನೆ ನಡೆದಿದ್ದು, ಹನುಮಜಯಂತಿ ಮುನ್ನಾ ದಿನವೇ ಆಂಜನೇಯನ ದೇವಸ್ಥಾನದ ಮೇಲೆ ಮರ ಬಿದ್ದಿದೆ. ಇದನ್ನೂ ಓದಿ: ಜಾತಿಗಣತಿ ವರದಿ ಸೀಲ್ ಓಪನ್… ಕ್ಯಾಬಿನೆಟ್‌ನಲ್ಲಿ ಮಂಡನೆ; ಮುಂದಿನ ಕ್ಯಾಬಿನೆಟ್‌ಗೆ ಕ್ಲೈಮ್ಯಾಕ್ಸ್..!
ಆಂಜನೇಯನ ದೇವಸ್ಥಾನದ ಪಕ್ಕದಲ್ಲೇ ನಿಲ್ಲಿಸಿದ ಆಟೊ ಕೂಡ ಜಖಂ ಆಗಿದೆ. ಮಳೆ, ಗಾಳಿಗೆ ಬುಡ ಸಮೇತ ಮರ ಉರುಳಿ ಬಿದ್ದಿದೆ. ಇದನ್ನೂ ಓದಿ: ಮೈಸೂರು | ಮನೆ ಹಿಂಬಾಗಿಲಿನ ಬೀಗ ಮುರಿದು 22 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ಕಳ್ಳತನ
ನಾಳೆ (ಏ.12) ಈ ದೇವಸ್ಥಾನದಲ್ಲಿ ಹನುಮಜಯಂತಿ ಕಾರ್ಯಕ್ರಮ ನಡೆಯಬೇಕಿತ್ತು. ಹನುಮಜಯಂತಿ ಮುನ್ನಾ ದಿನವೇ ಈ ಅವಘಡ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರ ಬಿದ್ದಿದ್ದರಿಂದ ದೇವಸ್ಥಾನದ ಹಿಂಭಾಗ ಮಾತ್ರ ಸ್ವಲ್ಪ ಡ್ಯಾಮೇಜ್ ಆಗಿದೆ. ಸದ್ಯ ಮರ ತೆರವುಗೊಳಿಸಿ ಶನಿವಾರ ಪೂಜೆಗೆ ದೇವಸ್ಥಾನವನ್ನು ಸಿದ್ಧಗೊಳಿಸುತ್ತಿದ್ದಾರೆ. ಇದನ್ನೂ ಓದಿ: ಪ್ರಮೋದಾದೇವಿ ಒಡೆಯರ್‌ಗೆ ನಮ್ಮ ಗ್ರಾಮ ರಿಜಿಸ್ಟರ್ ಮಾಡಿಕೊಡಬೇಡಿ: ಡಿಸಿಗೆ ಗ್ರಾಮಸ್ಥರ ಮನವಿ