ಮಂಗಳೂರು: ಇಂದು ಕೂಡ ರಾಜ್ಯದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು ಸಹಿತ ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (Puttur) ನಗರ ಜಲಾವೃತಗೊಂಡಿದೆ.
ಮಳೆಯ ಆರ್ಭಟಕ್ಕೆ ಪುತ್ತೂರಿನ ದರ್ಬೆಯಲ್ಲಿ ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಅಲ್ಲದೇ ಕೋರ್ಟ್ ರೋಡ್ ಬಳಿಯ ಜ್ಯುವೆಲ್ಲರಿ ಅಂಗಡಿಯೊಂದು ಜಲಾವೃತಗೊಂಡಿದೆ. ಇನ್ನು ಭಾರೀ ಮಳೆಗೆ ರಸ್ತೆಗಳು ನದಿಯಂತಾದವು. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಯಲ್ಲೇ ನೀರು ನಿಂತಿದೆ. ಹೀಗಾಗಿ ರಸ್ತೆಯಲ್ಲಿ ನೀರು ಹೆಚ್ಚಾಗಿ ಪಕ್ಕದ ಅಂಗಡಿ ಮುಂಗಟ್ಟುಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಒಟ್ಟಾರೆ ಇಂದು ಸುರಿದ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
Advertisement
Advertisement
ಇತ್ತ ಚಾಮರಾಜನಗರದಲ್ಲಿ ಇಂದು ಮಳೆಯ ಅರ್ಭಟ ಜೋರಾಗಿದೆ. ಬಸ್ ನಿಲ್ದಾಣದಲ್ಲಿ ಮಳೆ ನೀರು ತುಂಬಿಕೊಂಡಿದೆ. ಹೀಗಾಗಿ ಗುಂಡ್ಲುಪೇಟೆ ಬಸ್ ನಿಲ್ದಾಣ ಜಲಾವೃತಗೊಂಡಿದೆ. ಬಸ್ ನಿಲ್ದಾಣದಲ್ಲಿ ನೀರು ತುಂಬಿದ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಟ ಅನುಭವಿಸಿದರು. ಇದನ್ನೂ ಓದಿ: ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್- ಮುಂಬೈ ಬಿಜೆಪಿಯಿಂದ 10 ಸಾವಿರ ಲಡ್ಡು ತಯಾರು
Advertisement
Advertisement
ಇನ್ನು ಜಿಲ್ಲೆಯಲ್ಲಿ ಸಿಡಿಲಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಚಾಮರಾಜನಗರ ತಾಲೂಕು ಬೇಡರಪುರ ಗ್ರಾಮದಲ್ಲಿ ಶಿವನಂಕಾರಪ್ಪ (50) ಸಿಡಿಲಿಗೆ ಬಲಿಯಾದ ರೈತ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಬಾಗಲಕೋಟೆ (Bagalkote) ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ಹುನಗುಂದ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಮಧ್ಯರಾತ್ರಿಯಿಂದ ಸುರಿದ ಮಳೆಗೆ ಹುನಗುಂದ ತಾಲೂಕಿನ ಬೇಕಮಲದಿನ್ನಿ – ಕರಡಿ ಗ್ರಾಮಕ್ಕೆ ತೆರಳುವ ರಸ್ತೆ ಜಲಾವೃತಗೊಂಡಿದೆ. ಪರಿಣಾಮ ವಾಹನ ಸಂಚಾರ ಬಂದ್ ಆಗಿದೆ.
ಭಾನುವಾರ ಸಂಜೆಯಿಂದಲೇ ಯಾದಗಿರಿ (Yadagiri) ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಸತತ 12 ಗಂಟೆಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನಿರಂತರ ಮಳೆಯಿಂದಾಗಿ ಯಾದಗಿರಿ ವಾತಾವರಣ ಕೂಲ್ ಕೂಲ್ ಆಗಿದೆ. ಉತ್ತಮ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ವಾರದ ಹಿಂದಷ್ಟೇ ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿತ್ತು. ಹೀಗಾಗಿ ಮಳೆ ಬಿದ್ದ ಬಳಿಕ ಅನ್ನದಾತರು ಬಿತ್ತನೆ ಕಾರ್ಯ ಶುರು ಮಾಡಿದ್ದರು. ಇದೀಗ ಮತ್ತೆ ಮಳೆ ಆಗಿದ್ರಿಂದ ರೈತರು ಫುಲ್ ಖುಷಿಯಾಗಿದ್ದಾರೆ.