ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ (Bay of Bengal) ಚಂಡಮಾರುತದ (Cyclone) ಪರಿಣಾಮ ಕರ್ನಾಟಕದ (Karnataka) ಕರಾವಳಿ ಸೇರಿ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಹವಾಮಾನ ಇಲಾಖೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಬೀಳಲಿದೆ. ಇದನ್ನೂ ಓದಿ: ಬಿರು ಬೇಸಿಗೆಯಲ್ಲೂ ರಾಜ್ಯದಲ್ಲಿ ಮಳೆ ಅಬ್ಬರ – ಬೆಂಗ್ಳೂರು ರಸ್ತೆಗಳು ಜಲಮಯ
ಬೆಂಗಳೂರು ನಗರ, ಗ್ರಾಮಾಂತರದಲ್ಲಿ ಇಂದೂ ಸಹ ಮಳೆಯಾಗಲಿದೆ. ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಎಷ್ಟು ಮಳೆಯಾಗುತ್ತೆ?
64.5 ಮಿ.ಮೀ ನಿಂದ 115.5 ಮಿ.ಮೀ ಒಳಗಡೆ ಮಳೆಯಾಗುವ ಸಾಧ್ಯತೆ ಇದ್ದರೆ ಯೆಲ್ಲೋ ಅಲರ್ಟ್ ಘೋಷಣೆಯಾಗುತ್ತದೆ. 115.6 ಮಿ.ಮೀ ನಿಂದ 204.4 ಮಿ.ಮೀ. ಒಳಗಡೆ ಮಳೆಯಾಗಲಿದ್ದರೆ ಆರೆಂಜ್ ಅಲರ್ಟ್ ಎಂದು ಪ್ರಕಟಿಸಲಾಗುತ್ತದೆ. 204.5 ಮಿ.ಮೀಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದರೆ ರೆಡ್ ಅಲರ್ಟ್ ಘೋಷಣೆ ಮಾಡಲಾಗುತ್ತದೆ.