ರಾಜ್ಯದಲ್ಲಿ ವರುಣನ ಅಬ್ಬರ – ತಾಯಿ, ಮಗ ಸೇರಿ ಮೂವರು ಬಲಿ

Public TV
2 Min Read
HBL Rain

ಬೆಂಗಳೂರು: ಬೀದರ್, ಧಾರವಾಡ, ಗದಗ, ಬೆಳಗಾವಿ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಿದ್ದು, ತಾಯಿ ಮಗ ಸೇರಿ ಒಟ್ಟು ಮೂವರು ಬಲಿಯಾಗಿದ್ದಾರೆ.

ಅರ್ಧಗಂಟೆ ಸುರಿದ ದಿಢೀರ್ ಮಳೆಗೆ ತಾಯಿ ಹಾಗೂ ಮಗ ನೀರುಪಾಲಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಯಲದಗುಂಡಿ ಗ್ರಾಮದಲ್ಲಿ ನಡೆದಿದೆ. ತಾಯಿ ಅನಿತಾ (35), ಮಗ ಭಾಗೇಶ್ (15) ನೀರು ಪಾಲಾದ ದುರ್ದೈವಿಗಳು. ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಅವರು ಹಳ್ಳ ದಾಟುತ್ತಿದ್ದರು. ಈ ವೇಳೆ ಕಾಲು ಜಾರಿ ನೀರಿನಲ್ಲಿ ಮಗ ಕೊಚ್ಚಿ ಹೋಗುವುದನ್ನು ನೋಡಿ ಕಾಪಾಡಲು ಹೋಗಿ ಅನಿತಾ ಅವರು ಕೂಡ ನೀರು ಪಾಲಾಗಿದ್ದಾರೆ.

collage 3

ವಿಷಯ ತಿಳಿಯುತ್ತಿದ್ದಂತೆ ಮಂಠಾಳ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಮೃತ ದೇಹಗಳಿಗಾಗಿ ಶೋಧ ಕಾರ್ಯ ನಡೆಸಿದರು. ಸ್ವಲ್ಪ ಸಮಯದ ಬಳಿಕ ಭಾಗೇಶ್ ಮೃತದೇಹ ಪತ್ತೆಯಾಗಿದ್ದು, ಅನೀತಾ ಅವರ ಮೃತದೇಹಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಮಂಠಾಳ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

DWD Rain

ಸಿಡಿಲು ಬಡಿದು ರೈತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಗದಗ ಜಿಲ್ಲೆಯ ಲಿಂಗದಾಳ ಗ್ರಾಮದಲ್ಲಿ ನಡೆದಿದೆ. ದೇವಕ್ಕ ಚನ್ನಪ್ಪ ದೊಡ್ಡನವರ್ (61) ಮೃತ ರೈತ ಮಹಿಳೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದ್ದು, ದೇವಕ್ಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜಿಲ್ಲೆ ಹಲವೆಡೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಅಥಣಿ, ಹುಕ್ಕೇರಿ ತಾಲೂಕಿನಲ್ಲಿ ಧಾರಕಾರ ಮಳೆಯಾಗಿದೆ. ವರಣನ ಅಬ್ಬರದಿಂದಾಗಿ ರಸ್ತೆಗಳು ನೀರಿನಲ್ಲಿ ಮುಚ್ಚಿಹೋಗಿ, ಸವಾರರು ಪರದಾಡುವಂತಾಯಿತು. ರಾಯಭಾಗ ಜೋಡಕುರಳಿ ಗ್ರಾಮದಲ್ಲಿ ಸಿಡಿಲಿಗೆ 2 ಎಮ್ಮೆ ಬಲಿಯಾಗಿವೆ.

rain followup 2

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವರುಣ ಆರ್ಭಟಿಸಿದ್ದಾನೆ. ಮಳೆ ನೀರಿಗೆ ರಸ್ತೆಗಳು ಕೆರೆಯಂತಾಗಿದ್ದವು. ಇದರಿಂದಾಗಿ ಬೈಕ್ ಸವಾರರು ಪರದಾಡುವಂತಾಯಿತು. ದಾವಣಗೆರೆಯಲ್ಲೂ ಭರ್ಜರಿ ಮಳೆಯಾಗಿದೆ.

ರಾಮನಗರ ಜಿಲ್ಲೆಯ ಹಲವೆಡೆ ಭರ್ಜರಿ ಮಳೆಯಾಗಿದ್ದು, ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಮಳೆಯಿಂದಾಗಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Share This Article
Leave a Comment

Leave a Reply

Your email address will not be published. Required fields are marked *