ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಮುಂದಿನ 5 ದಿನ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊನೆಯ ಮೂರು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಸಂಚಾರಿ ನಿಯಮ ಉಲ್ಲಂಘನೆ – ಆರು ತಿಂಗಳಲ್ಲಿ 1 ಕೋಟಿ 3 ಲಕ್ಷ ದಂಡ ವಸೂಲಿ
Advertisement
Advertisement
ಉತ್ತರ ಒಳನಾಡಿನ ಬೆಳಗಾವಿಗೆ ಆರೆಂಜ್ ಅಲರ್ಟ್ ಹಾಗೂ ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಹಾಗೂ ನಾಳೆಯಿಂದ ಇದೇ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Advertisement
Advertisement
ಬೆಂಗಳೂರಲ್ಲೂ ಮುಂದಿನ 5 ದಿನ ಸಾಧಾರಣ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಕೆಲ ಬಾರಿ ಗಾಳಿ ವೇಗ 60 ಕಿಮೀಗೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಡಿಕೆಶಿ ನಿಮ್ಮ ಪ್ರತಿಸ್ಪರ್ಧಿಯೇ: ಸಿದ್ದುಗೆ ಬಿಜೆಪಿ ಪ್ರಶ್ನೆ