ಮಂಗಳೂರು: ಕರಾವಳಿಯಲ್ಲಿ (Coastal Karnataka) ಭಾರೀ ಮಳೆಯಾಗುವ (Heavy Rain) ಸಾಧ್ಯತೆ ಇರುವ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಅರಬ್ಬೀ ಸಮುದ್ರದಲ್ಲೂ (Arabian Sea) ಎರಡು ದಿನಗಳ ಕಾಲ ಭಾರೀ ಗಾಳಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ CWMA ಸೂಚನೆ
Advertisement
Advertisement
ದಕ್ಷಿಣ ಕನ್ನಡ ಜಿಲ್ಲಾಡಳಿತ ಮೀನುಗಾರರಿಗೆ ಎಚ್ಚರಿಕೆಯ ಸೂಚನೆ ನೀಡಿದ್ದು ತಕ್ಷಣ ಸಮುದ್ರದಿಂದ ವಾಪಸ್ ಬರುವಂತೆ ಆದೇಶಿಸಿದೆ. ಹೀಗಾಗಿ ಹೆಚ್ಚಿನ ಮೀನುಗಾರಿಕಾ ಬೋಟ್‌ಗಳು ಮಂಗಳೂರಿನ (Mangaluru) ಬಂದರಿನಲ್ಲಿ ಲಂಗರು ಹಾಕಿದೆ.