ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿಗೆ (Bengaluru) ಯೆಲ್ಲೋ ಅಲರ್ಟ್ ಹಾಗೂ ಕರಾವಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಇದನ್ನೂ ಓದಿ: ಹಂಪಿಯಲ್ಲಿ ರಾಜ್ಯದ 2ನೇ ಅತಿದೊಡ್ಡ ತಾರಾಲಯ, ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಚಿಂತನೆ: ಬೋಸರಾಜು
ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸೋಮವಾರ ಮತ್ತು ಮಂಗಳವಾರ (ಮೇ 20) ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನ ರೆಡ್ ಅಲರ್ಟ್, ನಂತರದ ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ, ದಕ್ಷಿಣ ಒಳನಾಡಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಇದನ್ನೂ ಓದಿ: ಐಪಿಎಲ್ ಕುರಿತಾದ ಕ್ರೀಡಾ ಪ್ರಧಾನ ಚಿತ್ರದಲ್ಲಿ ಉಪ್ಪಿ-‘ಕರ್ವ’ ಡೈರೆಕ್ಟರ್ ಆ್ಯಕ್ಷನ್ ಕಟ್