ತಿರುವನಂತಪುರ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಕೇರಳದ 8 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಲ್ಕು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
Advertisement
ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ, ಕಣ್ಣೂರು, ಕಾಸರಗೋಡು ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೇ ಕೊಟ್ಟಾಯಂ, ಪತ್ತನಂತಿಟ್ಟ, ಕೊಲ್ಲಂ ಮತ್ತು ಅಲಪ್ಪುಳ ಜಿಲ್ಲೆಗಳಲ್ಲಿ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಕೇರಳ ವಿಶ್ವವಿದ್ಯಾನಿಲಯ ಮತ್ತು ಎಂಜಿ ವಿಶ್ವವಿದ್ಯಾನಿಲಯಗಳಲ್ಲಿ ಮಂಗಳವಾರ ನಡೆಯಬೇಕಿದ್ದ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಇದನ್ನೂ ಓದಿ: ಆದಿವಾಸಿಗಳ ದುಸ್ಥಿತಿಗೆ ಕಾಂಗ್ರೆಸ್ ಕಾರಣ: ಮೋದಿ
Advertisement
Advertisement
ವಾರಾಂತ್ಯದಿಂದ ಕೇರಳದಲ್ಲಿ ನಿರಂತರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಇನ್ನೂ ಮಳೆಯಿಂದಾಗಿ ರಾಜ್ಯದ ಹಲವೆಡೆ ಜಲಾವೃತವಾಗಿದ್ದು, ಕೇರಳದ ಅಪ್ಪರ್ ಕುಟ್ಟನಾಡ್‍ನ ಹಲವಾರು ಪ್ರದೇಶಗಳಿಗೆ ಭಾರೀ ಪ್ರಮಾಣದ ನೀರು ನುಗ್ಗಿದೆ. ಇದನ್ನೂ ಓದಿ: ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್
Advertisement
#WATCH | Kerala: Roads in parts of Pathanamthitta district waterlogged following heavy rainfall here in the past three days.
Visuals from Pathanamthitta town and Omalloor town. pic.twitter.com/tIabpXqzKC
— ANI (@ANI) November 15, 2021
ನಿರಂತರ ಮಳೆಯಿಂದಾಗಿ ಈಗಾಗಲೇ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಹಿಂದೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಭೂಕುಸಿತ ಮತ್ತು ಪ್ರವಾಹದ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದರು.