ಮಡಿಕೇರಿ: ರಣಭೀಕರ ಮಳೆಗೆ ಕೊಡಗು ಜಿಲ್ಲೆ ತತ್ತರಿಸಿ ಹೋಗಿದೆ. ಸಾಲು ಸಾಲು ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ಪರಿಣಾಮ ಜಿಲ್ಲೆಯ ಗಡಿಭಾಗವಾದ ದಕ್ಷಿಣ ಕನ್ನಡ ಹಾಗೂ ಸಂಪಾಜೆ ಗ್ರಾಮದಲ್ಲಿ ಮಳೆ ಅವಾಂತರಗಳಿಂದ ಗ್ರಾಮದ ಜನರು ಬೆಚ್ಚಿಬಿಳುತ್ತಿದ್ದಾರೆ.
ಗಡಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಗ್ರಾಮಸ್ಥರಿಗೆ ಜಲ ಸಂಕಷ್ಟ ಎದುರಾಗಿದೆ. ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪಯಸ್ವಿನಿ ನದಿ ತುಂಬಿ ಹರಿದು ಸಂಪಾಜೆ ಸಮೀಪದ ಕಲ್ಲುಗುಂಡಿ ರಸ್ತೆ ಸಂಪೂರ್ಣ ಜಲಾವೃತಗೊಂಡಿತ್ತು. ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಯಿತು.
Advertisement
Advertisement
ಅಕ್ಕಪಕ್ಕದ ಅಂಗಡಿ, ಮುಂಗಟ್ಟು, ಮನೆಗಳಿಗೂ ನೀರು ನುಗ್ಗಿದೆ. ವರ್ತಕರಿಗೆ ಅಪಾರ ನಷ್ಟ ಉಂಟಾಗಿದೆ. ನೋಡುತ್ತಿದಂತೆ ಕಲ್ಲುಗುಂಡಿಯಲ್ಲಿ ಪಯಸ್ವಿನಿ ನದಿಯ ಉಪನದಿಯ ನೀರು ರಾಷ್ಟ್ರೀಯ ಹೆದ್ದಾರಿ ಮೇಲೆ ನೀರು ಹರಿದ ಪರಿಣಾಮದಿಂದ 30ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು. ಅಷ್ಟೇ ಅಲ್ಲದೇ ಹೆದ್ದಾರಿ ಪಕ್ಕದಲ್ಲಿ ಇರುವ ಸುಮಾರು 50 ಅಂಗಡಿ ಮುಗ್ಗಟ್ಟುಗಳಿಗೆ ಹಾನಿಯಾಗಿದೆ.
Advertisement
Advertisement
ಅಷ್ಟೇ ಅಲ್ಲದೇ ಕೊಡಗಿನ ಮಡಿಕೇರಿ ತಾಲೂಕಿನ ಕೊಯನಾಡಿನಲ್ಲೂ ಮಳೆಯಿಂದ ಪ್ರವಾಹ ಏರ್ಪಟ್ಟಿದೆ. ಗ್ರಾಮಸ್ಥರ ವಿರೋಧದ ನಡುವೆಯೂ ಇಲ್ಲಿ ನಿರ್ಮಾಣಗೊಂಡಿರುವ ಕಿಂಡಿ ಅಣೆಕಟ್ಟೆಯಲ್ಲಿ ಮರದ ದಿಮ್ಮಿಗಳು ಕೊಚ್ಚಿ ಬಂದು ನಿಂತ ಪರಿಣಾಮ ಅಪಾಯದ ಮಟ್ಟ ಮೀರಿ ಹರಿದ ನದಿಯ ನೀರು ಸುತ್ತಮುತ್ತಲ ಮನೆಗಳನ್ನು ಆವರಿಸಿದೆ. ಪಕ್ಕದಲ್ಲೇ ಇರುವ ನಿವಾಸಿಗಳು ರಾತ್ರೋರಾತ್ರಿ ಮನೆ ಖಾಲಿ ಮಾಡಿದರು. ಹಲವು ಕುಟುಂಬಗಳನ್ನು ಕೊಯನಾಡಿನ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಅಷ್ಟೇ ಅಲ್ಲದೇ ಈ ಗ್ರಾಮದಲ್ಲಿ ಇರುವ ಸರ್ಕಾರಿ ಶಾಲೆಗೂ ಬೃಹತ್ ಗುಡ್ಡ ಕುಸಿದು ಶಾಲೆಗೆ ಮತ್ತಷ್ಟು ಹಾನಿಯಾಗಿದು ಗ್ರಾಮದ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಪ್ರವಾಹದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಕೊಯನಾಡಿಗೆ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿ ಪರಿಶೀಲಿಸಿದರು. ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾಳಜಿ ಕೇಂದ್ರದಲ್ಲಿರುವ ಕುಟುಂಬಗಳಿಗೆ ಧೈರ್ಯ ತುಂಬಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರು ಕೊಯನಾಡು ಹಾಗೂ ಸಂಪಾಜೆ ಮಳೆಹಾನಿ ಪ್ರದೇಶಗಳನ್ನು ವೀಕ್ಷಿಸಿದರು. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಕೊಯನಾಡು ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.
ಈ ವೇಳೆ ಸಂಪಾಜೆ ಬಳಿ ಒಂದು ಮನೆ ತೀವ್ರ ಹಾನಿಯಾಗಿದೆ. ಈ 5 ಮನೆಗಳಲ್ಲಿ ಒಂದು ಮನೆಗೆ ಹೆಚ್ಚಿನ ಹಾನಿಯಾಗಿದ್ದು, 4 ಮನೆಗಳು ಸಾಧಾರಣ ಹಾನಿಯಾಗಿದೆ. ಈ ಹಿನ್ನೆಲೆ ಕೊಯನಾಡು ದೇವಸ್ಥಾನ ಕಲಾ ಮಂದಿರಕ್ಕೆ 5 ಕುಟುಂಬಗಳ 21 ಜನರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಕಂದಾಯ ನಿರೀಕ್ಷಕರಾದ ವೆಂಕಟೇಶ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಂಕಿಪಾಕ್ಸ್ ಬಗ್ಗೆ ಆತಂಕ ಬೇಡ, ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ: ಸುಧಾಕರ್
ಒಟ್ಟಿನಲ್ಲಿ ಮಹಾಮಳೆಯ ರುದ್ರವಾತಾರಕ್ಕೆ ಜಿಲ್ಲೆಯ ಜನರು ಬೆಚ್ಚಿ ಬೇಳುತ್ತಿದ್ದಾರೆ. ಅಷ್ಟೇ ಅಲ್ಲದೇ ಅಗಸ್ಟ್ ತಿಂಗಳು ಮತ್ತಷ್ಟು ಮಳೆ ಅಗುವ ಸಾದ್ಯತೆ ಇರುವುದರಿಂದ 2018ರ ಕರಾಳ ದಿನಗಳು ಮತ್ತೆ ಮರುಕಳಿಸುವ ಸೂಚನೆ ಇದೀಗ ಪ್ರಕೃತಿ ನೀಡುತ್ತಿದೆ ಎಂದು ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಇದನ್ನೂ ಓದಿ: ಅಹಂಕಾರದಿಂದ ಕುರುಡಾಗಿರುವ ಸರ್ಕಾರಕ್ಕೆ ಹಣದುಬ್ಬರ ಎಲ್ಲಿ ಕಾಣಿಸುತ್ತದೆ: ರಾಹುಲ್ ಕಿಡಿ