DistrictsKarnatakaLatestLeading NewsMain Post
ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿ – ರಸ್ತೆಯ ಮೇಲೆ ಹರಿಯುತ್ತಿದೆ ನೀರು

Advertisements
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಭಾಗಮಂಡಲದಲ್ಲಿರುವ ತ್ರಿವೇಣಿ ಸಂಗಮ ಭರ್ತಿಯಾಗಿದೆ.
ಬ್ರಹ್ಮಗಿರಿ ಬೆಟ್ಟ ಭಾಗದಲ್ಲಿ ಎಡಬಿಡದೆ ಮಳೆಯಾಗುತ್ತಿದ್ದು ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆಯಾಗಿದೆ. ಈಗ ಸಂಗಮ ಭರ್ತಿಯಾಗಿ ನಾಪೋಕ್ಲು ರಸ್ತೆ ಮೇಲೆ ನೀರು ಹರಿಯುತ್ತಿದೆ.
ಮಳೆ ಮುಂದುವರಿದರೆ ಇನ್ನಷ್ಟು ನೀರಿನ ಮಟ್ಟ ಹೆಚ್ಚಳವಾಗಲಿದ್ದು, ನಾಪೋಕ್ಲು ಭಾಗಮಂಡಲ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಭಾರೀ ಮಳೆಯಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧ – ರಾಜ್ಯದ ವಿವಿಧೆಡೆ ಭೂಕುಸಿತ, ಭೂಮಿ ಕಂಪಿಸಿದ ಅನುಭವ
ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆಯಲ್ಲಿ ಭಾರೀ ಮಳೆಯಾಗುತ್ತಿದೆ. ಹಾರಂಗಿ ಜಲಾಶಯ ಭರ್ತಿಯಾಗಿದ್ದು ಶನಿವಾರ ಶಾಸಕ ಅಪ್ಪಚ್ಚು ರಂಜನ್ ಬಾಗಿನ ಅರ್ಪಿಸಿದ್ದಾರೆ. 1,200 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.