ಭಾರೀ ಗಾಳಿ ಸಹಿತ ಮಳೆ – ಮನೆ ಕುಸಿದು ಕಾರ್ಮಿಕ ಮಹಿಳೆ ಸಾವು

Public TV
1 Min Read
Kodagu Rain 2

ಮಡಿಕೇರಿ: ಕೊಡಗು (Kodagu) ಜಿಲ್ಲೆಯಾದ್ಯಂತ ಕಳೆದ ರಾತ್ರಿಯಿಂದ ಭಾರೀ ಗಾಳಿ ಸಹಿತ ಮಳೆ ಪ್ರಮಾಣ ಹೆಚ್ಚಾಗಿದ್ದು, ಜಿಲ್ಲೆಯ ನಾನಾ ಭಾಗಗಳಲ್ಲಿ ಮಳೆಯ ಅವಾಂತರಗಳು (Rain Effect) ಮುಂದುವರಿಯುತ್ತಿದೆ.

ಈ‌ ನಡುವೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿಂದು ಬೆಳಗ್ಗೆ 5:30ರ ಸುಮಾರಿಗೆ ಮಳೆ ಗಾಳಿಗೆ ಮನೆ ಕುಸಿದು ಬಿದ್ದು ಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಇದನ್ನೂ ಓದಿ: ಬಾಗಲಕೋಟೆ | ಬೈಕ್ ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ ಪಲ್ಟಿ – ಇಬ್ಬರು ದುರ್ಮರಣ

Kodagu Rain

ಮಹಿಳೆ ಮೃತಪಟ್ಟಿದ್ದು, ಆಕೆಯ ಮಕ್ಕಳು ಹಾಗೂ ಸಹೋದರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾನಗಲ್‌ ಗ್ರಾಮದ ಗಣಪತಿ ದೇವಸ್ಥಾನದ ಸಮೀಪದಲ್ಲಿರುವ ಸುಷ್ಮಾ (37) ಮೃತ ಮಹಿಳೆ ಆಗಿದ್ದಾರೆ. ಇವರ ಮೂವರು ಮಕ್ಕಳು ಹಾಗೂ ಸಹೋದರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದನ್ನೂ ಓದಿ: ಉದಯಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಶಿಕ್ಷಕರಿಂದ ಕಿರುಕುಳ ಆರೋಪ

Kargil Vijay Diwas

ಮಳೆಯಲ್ಲೇ ಕೊಡಗಿನಲ್ಲಿ ಕಾರ್ಗಿಲ್‌ ವಿಜಯೋತ್ಸವ
ಇನ್ನೂ ಸೇನಾನಾಡು ಕೊಡಗಿನಲ್ಲಿ ಕಾರ್ಗಿಲ್‌ ವಿಜಯೋತ್ಸವವನ್ನ (Kargil Vijay Diwas) ಸಂಭ್ರಮದಿಂದ ಆಚರಿಸಲಾಯಿತು. ಮಳೆಯನ್ನು ಲೆಕ್ಕಿಸದೇ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್‌ನಿಂದ ಮಡಿಕೇರಿ ನಗರದ ಯುದ್ಧ ಸ್ಮಾರಕ ಬಳಿ ಪುಷ್ಪ ನಮನ ಸಲ್ಲಿಸುವ ಮೂಲಕ ಯೋಧರಿಗೆ ಗೌರವ ಸಲ್ಲಿಲಾಯಿತು. ಇದನ್ನೂ ಓದಿ: ರಾಧಾನಗರಿ ಜಲಾಶಯದಿಂದ 4 ಗೇಟ್‌ಗಳ ಮೂಲಕ ನೀರು ಬಿಡುಗಡೆ – ದೂದ್‌ಗಂಗಾ ನದಿ ತೀರದಲ್ಲಿ ಹೈಅಲರ್ಟ್

Kargil Vijay Diwas 3

ನೂರಾರೂ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಅಗಲಿದ ವೀರ ಸೇನಾನಿಗಳನ್ನ ಸ್ಮರಿಸಿದರು. ಅಲ್ಲದೇ ಅಂದಿನ ದಿನದಲ್ಲಿ ಸೈನಿಕರು ಹಾಗೂ ಅವರ ಕುಟುಂಬಸ್ಥರು ಯಾವ ರೀತಿಯ ನೋವು ಅನುಭವಿಸುತ್ತಿದ್ದರು, ಇಂದಿನ ದಿನಗಳಲ್ಲಿ ಸೈನಿಕರ ಕುಟುಂಬಗಳನ್ನ ಸರ್ಕಾರಿ ಅಧಿಕಾರಿಗಳು ಹೇಗೆ ನೋಡ್ತಿದ್ದಾರೆ ಅಂತ ಕೆಲ ಸೈನಿಕರು ನೋವು ಹಂಚಿಕೊಂಡರು. ಈ ಸಂದರ್ಭದಲ್ಲಿ ಹಿಂದೂ ಪರ ಕಾರ್ಯಕರ್ತರು ಸಿಹಿ ಹಂಚಿ ಕಾರ್ಗಿಲ್‌ ವಿಜಯೋತ್ಸವವನ್ನು ಸಂಭ್ರಮಿಸಿದರು.

Share This Article