ಮಂಗಳೂರು: ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾದ ಪರಿಣಾಮ ಮನೆಯೊಂದರ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಸೇರಿ ಐವರು ಮಣ್ಣಿನಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯದ ಪರ್ವತಮುಖಿ ಎಂಬಲ್ಲಿ ನಡೆದಿದೆ.
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಕುಮಾರಧಾರ ನದಿ ಸೇರಿದಂತೆ ಹಳ್ಳಗಳಲ್ಲಿ ಭಾರಿ ಪ್ರಮಾಣದ ನೀರು ಹರಿದುಬರುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಇಂದು ರಾತ್ರಿ ಸುಬ್ರಹ್ಮಣ್ಯದ ಪರ್ವತಮುಖಿಯ ಕುಶಾಲಪ್ಪ ಎಂಬವರ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಮನೆಯಲ್ಲಿ ಐವರು ಇದ್ದರು ಎಂದು ಶಂಕೆ ವ್ಯಕ್ತವಾಗಿದ್ದು, ಮಣ್ಣಿನಡಿಯಲ್ಲಿ ಇಬ್ಬರು ಮಕ್ಕಳಾದ ಶ್ರುತಿ (11), ಗಾನ (6) ಸೇರಿದಂತೆ ಐವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗುಡ್ಡ ಕುಸಿದು ಮನೆ ಸಂಪೂರ್ಣ ನೆಲ ಸಮವಾಗಿದ್ದು, ಸ್ಥಳಕ್ಕೆ ಸ್ಥಳೀಯ ಆಡಳಿತ ಸಿಬ್ಬಂದಿ ಮತ್ತು ಪೊಲೀಸರು ಆಗಮಿಸಿ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸುವ ಕಾರ್ಯ ಬರದಿಂದ ಸಾಗಿದೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- ಅಧಿಕೃತ ಆದೇಶಕ್ಕೆ ಮೊದ್ಲೇ NIA ತನಿಖೆ
ಭಾರೀ ಮಳೆಯಿಂದಾಗಿ ಪ್ರಸಿದ್ಧ ನಾಗಕ್ಷೇತ್ರ ಆದಿ ಸುಬ್ರಹ್ಮಣ್ಯ ದೇವಸ್ಥಾನದ ವಠಾರ ಮುಳುಗಡೆಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಎರಡು ದಿನ ಭಕ್ತರ ಪ್ರವೇಶ ನಿಷೇಧ ಹೇರಲಾಗಿದ್ದು, ಎರಡು ದಿನ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರದಂತೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸುರತ್ಕಲ್‌ನಲ್ಲಿ ಬೀಚ್‌ನಲ್ಲಿ ಭಿನ್ನ ಕೋಮಿನ ಯುವಕನ ಜೊತೆ ಬಂದ ಯುವತಿ ಮೇಲೆ ರೇಪ್
Live Tv
[brid partner=56869869 player=32851 video=960834 autoplay=true]