ಮಡಿಕೇರಿ: ಮಂಗಳವಾರ ಮಧ್ಯಾಹ್ನದ ಬಳಿಕ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ.
ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆಯಾಗುತ್ತಿದ್ದು, ಅನಿರೀಕ್ಷಿತ ಮಳೆಗೆ ಪ್ರಯಾಣಿಕರು ಮತ್ತು ಸವಾರರು ಪರದಾಡುತ್ತಿದ್ದಾರೆ. ಮಳೆಗಾಲ ನೆನಪಿಸುವಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ.
ಕೊಡಗು, ಚಾಮರಾಜನಗರ ಹಾಗೂ ಹಾಸನದಲ್ಲಿ ಮೇ 24 ಮತ್ತು 25ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮೇಲ್ಮೈ ಸುಳಿಗಾಳಿ ಹಾಗೂ ಗಾಳಿಯ ಒತ್ತಡ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡು ಭಾಗದ ಕೆಲವಡೆ ಮಳೆಯಾಗುತ್ತಿದೆ. ಮೇ 24 ಮತ್ತು 25 ರಂದು ಕೊಡಗು, ಚಿಕ್ಕಮಗಳೂರು, ಹಾಸನ, ಚಾಮರಾಜನಗರ ಸೇರಿದಂತೆ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.