24 ಗಂಟೆಯಲ್ಲಿ ಟಿಬಿ ಡ್ಯಾಂಗೆ ಬಂತು 4 ಟಿಎಂಸಿ ನೀರು

Public TV
1 Min Read
TB Dam Water Tungabhadra Dam

ಬಳ್ಳಾರಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ (Rain) ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದ (Tungabhadra Dam) ಒಳ ಹರಿವಿನಲ್ಲಿ ಹೆಚ್ಚಳವಾಗುತ್ತಿದೆ.

24 ಗಂಟೆಗಳಲ್ಲಿ ಜಲಾಶಯಕ್ಕೆ 4 ಟಿಎಂಸಿ ನೀರು ಹರಿದು ಬಂದಿದೆ. ಸದ್ಯ ಜಲಾಶಯಕ್ಕೆ 45,500 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಶನಿವಾರ 13.90 ಟಿಎಂಸಿ ಇದ್ದ ನೀರಿನ ಸಂಗ್ರಹ ಇಂದು 18.24 ಟಿಎಂಸಿಗೆ ಏರಿಕೆಯಾಗಿದೆ. ಇದನ್ನೂ ಓದಿ: ಓದಿದ್ದು 10ನೇ ತರಗತಿ ಮಾಡುವುದು ಡಾಕ್ಟರ್ ವೃತ್ತಿ- ಬಾಗಲಕೋಟೆಯಲ್ಲಿದ್ದಾರೆ 384 ನಕಲಿ ವೈದ್ಯರು

tungabhadra dam TB DAM Koppala 1 1
ಟಿಬಿ ಡ್ಯಾಂ ಸಾಂದರ್ಭಿಕ ಚಿತ್ರ

ಒಳ ಹರಿವಿನ ಪ್ರಮಾಣದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳ ಹರಿವು ಇದ್ದಿದ್ದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಇದನ್ನೂ ಓದಿ: ಮೆದುಳು ತಿನ್ನುವ ಅಮೀಬಾ ಸೋಂಕು – ಕೇರಳದಲ್ಲಿ 4ನೇ ಪ್ರಕರಣ ಪತ್ತೆ

ತುಂಗಭದ್ರಾ ಭದ್ರಾ ಜಲಾಶಯ ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳ ರೈತರ ಜೀವನಾಡಿಯಾಗಿದೆ. ಇದೇ ರೀತಿ ನೀರಿನ ಒಳ ಹರಿವು ಬಂದರೆ ಈ ವಾರದಲ್ಲೇ ಜಲಾಶಯ ಬಹುತೇಕ ಭರ್ತಿಯಾಗಲಿದೆ.

Share This Article