ಬೆಂಗಳೂರು: ರಾಜಧಾನಿ ಬೆಂಗಳೂರಿನ (Bengaluru) ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಮಳೆಯಾಗಿದೆ. ಈ ಬೆನ್ನಲ್ಲೇ ಆರೆಂಜ್ ಅಲರ್ಟ್ (Orange alert) ಘೋಷಿಸಿರುವ ರಾಜ್ಯ ಹವಾಮಾನ ಇಲಾಖೆ ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ.
Bengluru Rain#Bengalururains #bengaluru #bengalore pic.twitter.com/egmbn5quNx
— ವರದ (@banakarhuduga) May 21, 2026
ನಗರದ ಸಂಪಂಗಿರಾಮನಗರ, ಕಂಠೀರವ ಸ್ಟೇಡಿಯಂ, ಕಾರ್ಪೋರೇಷನ್ ಸರ್ಕಲ್ ಸುತ್ತಮುತ್ತ ಹಾಗೂ ಬೆಂಗಳೂರು ಗ್ರಾಮಾಂತರಕ್ಕೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಒಟ್ಟಿನಲ್ಲಿ ಮುಂದಿನ 3 ಗಂಟೆಗಳ ಕಾಲ ಆಲಿಕಲ್ಲು, ಬಿರುಗಾಳಿ ಸಹಿತ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದಿರುವಂತೆ ಸೂಚಿಸಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಮಳೆ – ಹಳಿಯಲ್ಲಿ ನಿಂತ ಮೆಟ್ರೋ, ಎಲ್ಲಾ ಮಾರ್ಗದಲ್ಲಿ ವಿಳಂಬ
#BengaluruRains heavy rain in Whitefield with winds pic.twitter.com/Mo7UPcyFiA
— Sanjay (@sanjayss24848) May 21, 2026
ಆಲಿಕಲ್ಲು ಮಳೆ ಆರಂಭ
ಬೆಂಗಳೂರಿನಲ್ಲಿ ಸಂಜೆ 6 ಗಂಟೆ ಬಳಿಕ ಮಳೆ ಆರಂಭವಾಗಿದೆ. ವಿಧಾನಸೌಧ, ಕಬ್ಬನ್ ಪಾರ್ಕ್, ಕಾರ್ಪೋರೇಷನ್ ಸುತ್ತಮುತ್ತ ವರುಣನ ಸಿಂಚನವಾಗಿದೆ. ಇದನ್ನೂ ಓದಿ: ಆಲಮಟ್ಟಿ ಜಲಾಶಯದಲ್ಲಿದೆ ಕೇವಲ 9 ಟಿಎಂಸಿಯಷ್ಟು ನೀರು – ಕೃಷ್ಣೆಯ ಒಡಲಲ್ಲಿ ನೀರಿಗಾಗಿ ಹಾಹಾಕಾರ

ಕಳೆದ ಅರ್ಧ ಗಂಟೆಯಿಂದ ಮಳೆ ಸುರಿಯುತ್ತಿರುವ ಹಿನ್ನೆಲೆ ನಗರದ ಬಹುತೇಕ ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಖನಿಜ ಭವನ ಮುಂಭಾಗದಲ್ಲಿ ಬೃಹತ್ ಮರವೊಂದು ದರೆಗುರುಳಿದೆ. ರೇಸ್ ಕೋರ್ಸ್ ರಸ್ತೆ ಸುತ್ತ ಮುತ್ತ ಟ್ರಾಫಿಕ್ ಜಾಮ್ ಆಗಿದೆ.

