Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
Last updated: March 16, 2026 11:03 pm
Public TV
Share
2 Min Read
rain
ಕೊಡಗಿನಲ್ಲಿ ಧಾರಾಕಾರ ಮಳೆ
SHARE

ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ ತಂಪೆರೆದಿದ್ದಾನೆ.

ಕೊಡಗು (Kodagu) ಜಿಲ್ಲೆಯ ಹಲವೆಡೆ ಧಾರಾಕಾರವಾಗಿ ಮಳೆ ಸುರಿದಿದ್ದು, ಗುಡುಗು ಸಹಿತ ವರುಣ ಅಬ್ಬರಿಸಿದ್ದಾರೆ. ಇತ್ತ ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ಇದನ್ನೂ ಓದಿ: ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

ಹಾಸನ (Hassan) ಜಿಲ್ಲೆಯ ವಿವಿಧೆಡೆ ಧಾರಾಕಾರವಾಗಿ ಆಲಿಕಲ್ಲು ಮಳೆಯಾಗಿದೆ. ಆಲಿಕಲ್ಲು, ಬಿರುಗಾಳಿ, ಗುಡುಗು, ಮಿಂಚು, ಸಿಡಿಲು ಸಹಿತ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದ ವಾಹನ ಸವಾರರು ಹಾಗೂ ಬೀದಿ ಬದಿ ವ್ಯಾಪಾರಸ್ಥರ ಪರದಾಡುವಂತಾಗಿದೆ. ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ವರುಣ ತಂಪೆರೆದಿದ್ದಾನೆ. ಮೊದಲ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ಚರಂಡಿಗಳು ಬ್ಲಾಕ್ ಆಗಿ ಮನೆಗೆ ನೀರು ನುಗ್ಗಿದೆ. ಸತತ ಒಂದು ಗಂಟೆ ಸುರಿದ ಮಳೆಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದು, ಅವಾಂತರ ಉಂಟಾಗಿದೆ.

ಕೋಟೆನಾಡು ಚಿತ್ರದುರ್ಗದಲ್ಲಿಯೂ (Chitradurga) ಕೂಡ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಮಳೆ ಸುರಿದಿದ್ದು, ಬಿಸಿಲ ಬೇಗೆಗೆ ಕಾದಿದ್ದ ಭೂಮಿಗೆ ತಂಪೆರೆದಿದ್ದಾನೆ. ಇನ್ನೂ ದಾವಣಗೆರೆಯಲ್ಲಿಯೂ (Davanagere) ಆಲಿಕಲ್ಲು ಮಳೆಯಾಗಿದ್ದು, ಹರಿಹರದಲ್ಲಿ ಗುಡುಗು, ಮಿಂಚು ಸಹಿತ ವರುಣ ಆರ್ಭಟಿಸಿದ್ದಾನೆ.

ಇನ್ನೂ ಕೊಪ್ಪಳದಲ್ಲಿ (Koppal) ಮಳೆಯಿಂದಾಗಿ ಅನಾಹುತ ಉಂಟಾಗಿದೆ. ಸಿಡಿಲು ಬಡಿದು 15 ವರ್ಷದ ಬಾಲಕ ಮಂಜುನಾಥ್ ಸಾವನ್ನಪ್ಪಿದ್ದಾನೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದ್ದು, ಕೊಪ್ಪಳದ ಯಲಬುರ್ಗಾದಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಕಂದಾಯ, ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಭಾರಿ ಮಳೆಯಾಗಿದೆ. ಎರಡು ಗಂಟೆ ಸತತ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಆಲಿಕಲ್ಲು ಮಳೆಯಿಂದಾಗಿ ಜಾನುವಾರುಗಳು ಪರದಾಡುವಂತಾಗಿದ್ದು, ಬಿಟ್ಟು ಬಿಡದೇ ಮಳೆಸುರಿದಿದೆ.

ಹಾವೇರಿ (Haveri) ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಮೇಡ್ಲೇರಿ ಗ್ರಾಮದಲ್ಲಿ ಆಲಿಕಲ್ಲು ಮಳೆಯಾಗಿದೆ. ಅರ್ಧ ಗಂಟೆ ಕಾಲ ಬಿರುಗಾಳಿ ಸಮೇತ ಆಲಿಕಲ್ಲು ಮಳೆಗೆ ಜಮೀನಿನಲ್ಲಿರೋ ಜೋಳ ಮತ್ತು ಮೆಕ್ಕೆಜೋಳದ ಬೆಳೆಗಳು ಹಾಳಾಗುವ ಆತಂಕ ಎದುರಾಗಿದೆ.

ಗಡಿ ಜಿಲ್ಲೆ ಬೀದರ್‌ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಗುಡುಗು, ಸಿಡಿಲು ಸಹಿತ ಮಳೆಗೆ ಜನ ಭಯಭೀತರಾಗಿದ್ದಾರೆ. ಬೀದರ್, ಹುಮ್ನಾಬಾದ್, ಬಸವಕಲ್ಯಾಣ, ಔರಾದ್ ಸೇರಿದಂತೆ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.ಇದನ್ನೂ ಓದಿ: ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’

TAGGED:bengaluruhassanKalaburagiKoppalrainಆಲಿಕಲ್ಲು ಮಳೆಬೆಂಗಳೂರುಮಳೆಹವಾಮಾನ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
37 minutes ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
58 minutes ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
2 hours ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
2 hours ago
Donald Trump
Latest

ಟ್ರಂಪ್‌ಗೆ ಮುಖಭಂಗ – ಯುದ್ಧ ನೌಕೆಗಳನ್ನು ಕಳುಹಿಸಲ್ಲ ಎಂದ ಮಿತ್ರ ದೇಶಗಳು

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bellary

ಕಡಿವಾಣ ಹಾಕಬೇಕಿದ್ದ ಪೊಲೀಸರೇ ಅಕ್ರಮಗಳಿಗೆ ಬೆಂಗಾವಲು – ಸಿಬ್ಬಂದಿ ಮೇಲೆ ವರ್ಗಾವಣೆ ತೂಗುಗತ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?