ಬೆಂಗಳೂರು/ನೆಲಮಂಗಲ: ತಡರಾತ್ರಿ ಸುರಿದ ಧಾರಾಕಾರ ಮಳೆಗೆ ನೆಲಮಂಗಲದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.
ರಾತ್ರೀ ಇಡೀ ಸುರಿದ ಭಾರೀ ಮಳೆಗೆ ಮುಕ್ತನಾತೇಶ್ವರ ದೇವಾಲಯದ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಅಮಾನಿಕೆರೆ, ಹಾಗೂ ಬಿನ್ನಮಂಗಲದ ಕೆರೆಗಳು ಕೋಡಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಎಂಜಿ ರಸ್ತೆ ಸಂಪರ್ಕ ಕಡಿತಗೊಳಿಸಲಾಗಿದೆ ಹಾಗೂ ಜನಪ್ರಿಯ ಅಪಾರ್ಟ್‍ಮೆಂಟ್ ರಸ್ತೆ ಕೂಡ ಜಲಾವೃತಗೊಂಡಿದೆ. ಇದನ್ನೂ ಓದಿ: ಹಿಂದೂ ಸಂಪ್ರದಾಯದಂತೆ ಬ್ರಾಹ್ಮಣ ಯುವತಿಯನ್ನು ವರಿಸಿದ ಬಾಂಗ್ಲಾದೇಶದ ಮಹಿಳೆ
ಅಮಾನಿಕೆರೆ ಹಾಗೂ ಬಿನ್ನಮಂಗಲದ ಕೆರೆಗಳು ಕೋಡಿ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಗೆ ಕೆರೆಯ ನೀರು ನುಗ್ಗಿದ್ದು, ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ಅಲ್ಲದೇ ನೂರಾರು ವಾಹನಗಳು ಮಳೆಯ ನೀರಿನಲ್ಲಿ ಮುಳುಗಡೆಯಾಗಿದೆ. ಇದೀಗ ನೆಲಮಂಗಲ ಬೆಂಗಳೂರು ಸರ್ವೀಸ್ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಮತ್ತೊಂದೆಡೆ ಅಡಕಮಾರನಹಳ್ಳಿಯ ಜೈನ್ ಟೆಂಪಲ್ ಕೂಡ ನಾಲ್ಕೈದು ಅಡಿ ನೀರಿನಿಂದ ಜಲಾವೃತವಾಗಿದೆ.
ಮಳೆಯಿಂದಾಗಿ ನೆಲಮಂಗಲ ಸರ್ವಿಸ್ ರಸ್ತೆಯಲ್ಲಿ ಕಿಲೋಮೀಟರ್ ದೂರ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿತ್ತು. ಈ ವೇಳೆ ಹುಚ್ಚು ಸಾಹಸಕ್ಕೆ ಮುಂದಾದ ಗೂಡ್ಸ್ ವಾಹನದ ಚಾಲಕ ಜನರನ್ನು ತುಂಬಿಕೊಂಡು ವೇಗವಾಗಿ ಹರಿಯುತ್ತಿರುವ ನೀರಿನಲ್ಲಿ ಬಂದು ವಾಹನದಲ್ಲಿಯೇ ಲಾಕ್ ಆಗಿದ್ದಾರೆ. ನಂತರ ವಾಹನದಲ್ಲಿ ಇದ್ದ ಯುವಕರು ವಾಹನವನ್ನು ನೀರಿನಿಂದ ಹೊರತರಲು ಹರಸಾಹಾಸ ಪಟ್ಟಿದ್ದಾರೆ. ಇದನ್ನೂ ಓದಿ: ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರದ ಮೆರವಣಿಗೆ ಕಂಡು ಡಿಜೆ ಬಂದ್ ಮಾಡಿದ ಗಣೇಶ ಭಕ್ತರು
ಇನ್ನೊಂದೆಡೆ ನೆಲಮಂಗಲ ಅಡಕಮಾರನಹಳ್ಳಿ ಬಳಿ ಹರಿಯುತ್ತಿರುವ ನೀರಿನಲ್ಲಿ ರಸ್ತೆ ದಾಟಲು ಮಗನ ಜೊತೆಗೆ ಪೋಷಕರು ಹರಸಾಹಸ ಪಟ್ಟರು. ಇದೀಗ ಸರ್ವೀಸ್ ರಸ್ತೆಯಲ್ಲಿ ನೂರಾರು ಲಾರಿಗಳು ನೀರಿನಲ್ಲಿ ಮುಳುಗಡೆಯಾಗಿದ್ದು, ರಸ್ತೆಯನ್ನು ಸಂಪೂರ್ಣವಾಗಿ ಬ್ಲಾಕ್ ಮಾಡಲಾಗಿದೆ.