ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗ ಸೇರಿದಂತೆ ಕರಾವಳಿ, ಮಲೆನಾಡು ಭಾಗಗಳಲ್ಲಿ ಸೆ.5 ಮತ್ತು 6ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದ ಕಳೆದ ಹಲವು ದಿನಗಳಿಂದ ರಾಜ್ಯದ ವಿವಿಧೆಡೆ ಮುಂಗಾರು ಮಳೆ ಚುರುಕುಗೊಂಡಿದೆ. ವಾಯುಭಾರ ಸ್ಥಿತಿ ಮುಂದುವರಿದಿರುವ ಕಾರಣದಿಂದ ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದನ್ನೂ ಓದಿ: ಮನೆಯಂಗಳಕ್ಕೆ ಬಂದ ಹಾವು ಹಿಡಿದು ರಕ್ಷಿಸಿದ ಆರರ ಪೋರಿ
Advertisement
Advertisement
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಕಳೆದ ಕೆಲ ದಿನಗಳಿಂದ ಬೀಳುತ್ತಿರುವ ಮಳೆ, ಇನ್ನೂ ಕೆಲ ದಿನಗಳ ಕಾಲ ಮುಂದುವರಿಯಲಿದೆ. ಕರಾವಳಿ ಭಾಗ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
Advertisement
ಜಿಲ್ಲೆಗಳಲ್ಲಿ ಮಳೆಯ ಅಬ್ಬರ:
ಕಳೆದ ನಾಲ್ಕು ದಿನಗಳಿಂದ ಮಳೆ ಬಿಸಿಲ ನಾಡು ವಿಜಯಪುರದಲ್ಲಿ ಮರೀಚಿಕೆ ಆಗಿತ್ತು. ಇಂದು ಮತ್ತೆ ಮಳೆ ಪ್ರಾರಂಭವಾಗಿದೆ. ನಿರಂತರ 3 ಗಂಟೆಯಿಂದ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಕೆಲವೆಡೆ ಮೋಡಕವಿದ ವಾತಾವರಣ ಮುಂದುವರಿದಿದ್ದು, ರಾತ್ರಿ ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಮಳೆಯಿಂದ ಜಿಲ್ಲೆಯ ರೈತ ವರ್ಗ ಸಂತೋಷಗೊಂಡಿದ್ದು, ಮಳೆ ಇಲ್ಲದೆ ಒಣಗಿ ಹೋಗಿದ್ದ ಬೆಳೆಗಳಿಗೆ ಮತ್ತೆ ಮಳೆ ಅಗಿದ್ದು ಜೀವ ತುಂಬಿದಂತಾಗಿದೆ. ಇದನ್ನೂ ಓದಿ: ಪ್ರೀತ್ಸೆ ಎಂದು ಲೈಂಗಿಕ ದೌರ್ಜನ್ಯ- ಕಾಮುಕ ಪ್ರೇಮಿಗೆ ಒಂದು ವರ್ಷ ಜೈಲು
ಗಡಿ ಜಿಲ್ಲೆ ಬೀದರ್ ನಲ್ಲಿ ಸತತ ಎರಡು ಗಂಟೆಗಳಿಂದ ಸುರಿದ ಧಾರಾಕಾರ ಮಳೆಗೆ ಬೀದರ್ ತಾಲೂಕಿನಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಬೀದರ್‍ನ ಪತ್ತೆಪೂರ್ ಗ್ರಾಮದ ಸೇತುವೆ ಮೇಲೆ ನೀರು ಹರಿದ ಪತ್ತೆಪೂರ್‍ದಿಂದ ಗಾದಗಿ ಗ್ರಾಮದ ರಸ್ತೆ ಸಂಪರ್ಕ ಕಡಿತವಾಗಿದೆ. ಧಾರಾಕಾರ ಮಳೆಗೆ ಜಮೀನಿನಲ್ಲಿ ಬೆಳೆದಿದ್ದ ಅಪಾರ ಪ್ರಮಾಣ ಬೆಳೆಗಳು ಹಾನಿಯಾಗಿದೆ. ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.