ಯಾದಗಿರಿ: ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಹೆಚ್ಚಾಗಿದ್ದು, ವರುಣನ ಆರ್ಭಟಕ್ಕೆ ಗ್ರಾಮಗಳ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದ ನೂರಾರು ಮನೆಗಳಿಗೆ ನೀರು ನುಗ್ಗಿದೆ.
Advertisement
ಗ್ರಾಮದ ಹೊರ ವಲಯದಲ್ಲಿರುವ ಕೆರೆ ಸಂಪೂರ್ಣವಾಗಿ ಭರ್ತಿಯಾಗಿದೆ. ಇದರಿಂದಾಗಿ ಕೆರೆ ತೀರದ ಮನೆಗಳಿಗೆ ನೀರು ನುಗ್ಗಿ, ಮನೆಯಲ್ಲಿನ ಆಹಾರ ಪದಾರ್ಥಗಳು ಹಾಳಾಗಿವೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ನಾಯ್ಕಲ್ ಗ್ರಾಮದ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಈಗಾಗಲೇ ಜನ ತಮ್ಮ ಜಾನುವಾರುಗಳನ್ನು ಬೇರೆಡೆಗೆ ಸ್ಥಳಾಂತರಿಸಿದ್ದಾರೆ. ಇದನ್ನೂ ಓದಿ: ದಸರಾ ತಯಾರಿ- ಸೆ.8ರಂದು ಮೈಸೂರಿನಲ್ಲಿ ಜನಪ್ರತಿನಿಧಿಗಳ ಸಭೆ
Advertisement
Advertisement
ನಗರದ ಹೊರ ವಲಯದಲ್ಲಿ ದುರ್ಗಾ ನಗರದಲ್ಲಿಯೂ ಇದೇ ಪರಿಸ್ಥಿತಿ ಉಂಟಾಗಿದೆ. ಕೆರೆ ತುಂಬಿ ಪ್ರತಿ ಬಾರಿಯೂ ಇದೇ ಪರಿಸ್ಥಿತಿ ಎದುರಾಗುತ್ತಿದ್ದು, ಶಾಶ್ವತ ಪರಿಹಾರಕ್ಕೆ ಸಂತ್ರಸ್ತರು ಆಗ್ರಹಿಸಿದ್ದಾರೆ.