ಪುಣೆ ನಗರದಲ್ಲಿ ವರುಣಾರ್ಭಟ, ರಸ್ತೆಗಳು ಜಲಾವೃತ – ಜನಜೀವನ ಅಸ್ತವ್ಯಸ್ತ

Public TV
1 Min Read
Pune Rain

ಮುಂಬೈ: ಪುಣೆ (Pune) ನಗರದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (Indian Meteorological Department) ರೆಡ್ ಅಲರ್ಟ್ (Red Alert) ಘೋಷಣೆ ಮಾಡಿದೆ.

20 ದಿನಗಳಿಂದ ಶುಷ್ಕ ಹವಾಮಾನದ ವಾತಾವರಣದಿಂದ ಕೂಡಿದ್ದ ಪುಣೆ ನಗರವು ಮೂರು ದಿನಗಳಿಂದ ದಿಢೀರ್ ಮಳೆಯಿಂದ ಕೂಡಿದೆ. ನಗರ ಸೇರಿದಂತೆ ಘಾಟ್ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದೆ.ಇದನ್ನೂ ಓದಿ: ನಮ್ರತಾ ಗೌಡ ಜೊತೆ ಕಿಶನ್ `ನವಿಲೇ’ ಡ್ಯಾನ್ಸ್

ಪುಣೆಯ ಶಿವಾಜಿನಗರದಲ್ಲಿ (Shivaji Nagar) ಮಂಗಳವಾರ ಸಂಜೆ 5:30ರವರೆಗೂ 19.2 ಮಿಮಿ. ಮಳೆ ದಾಖಲಾಗಿತ್ತು. ಇದರಿಂದಾಗಿ ಭಾರತೀಯ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿ, ಮುಂದಿನ 24 ಗಂಟೆಗಳಲ್ಲಿ ತ್ರೀವ ಮಳೆಯಾಗುವ ಸಾಧ್ಯತೆಯಿದೆ ಎಂದು ಮೂನ್ಸೂಚನೆ ನೀಡಿತ್ತು. ಬಳಿಕ ಮಳೆಯ ತೀವ್ರತೆಯಿಂದಾಗಿ ಸೆ.25 ರಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ.

Pune Rain 1

ಮಳೆಯ ತೀವ್ರತೆ ಹೆಚ್ಚಾಗಿದ್ದರಿಂದಾಗಿ ಪುಣೆ ನಗರದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ.

ಪುಣೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇದೀಗ ಸೆ.26 ರಂದು ಮಹಾರಾಷ್ಟ್ರ (Maharashtra)  ರಾಜ್ಯಕ್ಕೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇಲ್ಲಿನ ರಾಯಗಡ್ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ ಹಾಗೂ ಗುಜರಾತ್ ಸೇರಿ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.ಇದನ್ನೂ ಓದಿ: ಮಹಾಲಕ್ಷ್ಮಿ ಪ್ರಕರಣದಲ್ಲಿ ಟ್ವಿಸ್ಟ್‌ – ಶಂಕಿತ ಕೊಲೆ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

Share This Article