– ಆನೆಕಲ್‍ನಲ್ಲೂ ಆಲಿಕಲ್ಲು ಮಳೆ
ಬೆಂಗಳೂರು: ಬಿಸಿಲಿನ ತಾಪದಿಂದ ಕಂಗೆಟ್ಟ ಸಿಲಿಕಾನ್ ಸಿಟಿಗೆ ಮತ್ತೆ ವರುಣ (Rain In Bengaluru) ಎಂಟ್ರಿ ಕೊಟ್ಟಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಗುಡುಗು, ಮಿಂಚು ಸಹಿತ ಧಾರಕಾರ ಮಳೆಯಾಗುತ್ತಿದೆ. ಇನ್ನೂ ಕೆಲವೆಡೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ.
ಹವಾಮಾನ ಇಲಾಖೆಯು ಇಂದು ಸಂಜೆಯೊಳಗೆ ಮಳೆಯ ಮುನ್ಸೂಚನೆ ನೀಡಿತ್ತು. ಅಂತೆಯೇ ಸಂಜೆಯಾಗ್ತಿದ್ದಂತೆಯೇ ನಗರದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಜೊತೆಗೆ ಆನೇಕಲ್ ತಾಲೂಕಿನಾದ್ಯಂತ ಈ ವರ್ಷದ ಮೊದಲ ಮಳೆಯಾಗುತ್ತಿದೆ. ಇದನ್ನೂ ಓದಿ: ಪೆನ್‍ಡ್ರೈವ್ ಪ್ರಕರಣದಲ್ಲಿ ಷಡ್ಯಂತ್ರ- ಡಿಕೆಶಿ ವಿರುದ್ಧ ದೇವರಾಜೇಗೌಡ ನೇರ ಆರೋಪ
ಮೆಜೆಸ್ಟಿಕ್, ಕೆ ಆರ್ ಮಾರ್ಕೆಟ್, ಜಯನಗರ, ಜೆಜೆಆರ್ ನಗರ, ಟೌನ್ ಹಾಲ್ ಸುತ್ತ ಮುತ್ತ ಭಾರೀ ಮಳೆಯಾಗುತ್ತಿದೆ. ಸದಾಶಿವ ನಗರ, ಪ್ಯಾಲೇಸ್ ಗುಟ್ಟಹಳ್ಳಿ, ಮಲ್ಲೇಶ್ವರ, ವೈಯಾಲಿಕಾವಲ್, ಅರಮನೆ ಮೈದಾನ, ಶೇಷಾದ್ರಿಪುರ, ಯಶವಂತಪುರ ಸುತ್ತಮುತ್ತ ಆಲಿಕಲ್ಲು ಮಳೆಯಾಗುತ್ತಿದೆ. ವಿಧಾನಸೌಧ, ಕೆ.ಆರ್ ಸರ್ಕಲ್, ಕಾರ್ಪೋರೇಷನ್, ಟೌನ್ ಹಾಲ್ ಸುತ್ತಮುತ್ತ ಗುಡುಗು, ಮಿಂಚು ಸಹಿತ ಜೋರು ಮಳೆಯಾಗುತ್ತಿದೆ.
ಬೆಂಗಳೂರು ಹೊರವಲಯದ ಆನೇಕಲ್ ಸುತ್ತಮುತ್ತ ಕೂಡ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ವಣಕನಹಳ್ಳಿ, ಸೋಲೂರು ಗೊಮ್ಮಾಳಾಪುರ, ಭಾಗದಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಆನೇಕಲ್ ಅತ್ತಿಬೆಲೆ ಚಂದಾಪುರ ಜಿಗಣಿ ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಮಳೆಯಾಗುತ್ತಿದೆ. ಬಿಸಿಲ ಬೇಗೆಗೆ ಬೆಂಡಾಗಿದ್ದ ಭೂಮಿಗೆ ವರುಣ ತಂಪೆರೆದಿದ್ದಾನೆ. ದಿಢೀರ್ ಸುರಿದ ಮಳೆಯಿಂದ ಅಲ್ಲಲ್ಲಿ ಜನ ಪರದಾಟ ಅನುಭವಿಸಿದ್ದಾರೆ.