ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಜೋಯಿಡಾ, ದಾಂಡೇಲಿಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ (School Holiday) ಘೋಷಿಸಲಾಗಿದೆ.
ಹೆಚ್ಚಿನ ಮಳೆ ಹಿನ್ನೆಲೆ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಸುಗಮ: ಕೆಇಎ
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಎಡಬಿಡದೆ ಮಳೆ ಅಬ್ಬರಿಸುತ್ತಿದೆ. ಶಿರಸಿಯಲ್ಲಿ ಸುರಿದ ಮಳೆಗೆ ಬಡಾವಣೆಗಳೆಲ್ಲಾ ಜಲಾವೃತವಾಗಿದ್ದು, ಮನೆಗಳಿಗೂ ನೀರು ನುಗ್ಗಿದೆ. ಕೋಟೆ ಕೆರೆ ಕೋಡಿ ಬಿದ್ದಿದ್ದು, ರಸ್ತೆ ಮೇಲೆಲ್ಲಾ ನೀರು ಹರಿಯುತ್ತಿದೆ. ಇದನ್ನೂ ಓದಿ: 44 ಲಕ್ಷ ವಿಮೆ ಹಣಕ್ಕಾಗಿ ಪತ್ನಿಯನ್ನು ಹೊಡೆದು ಕೊಂದು ಕಾರು ಹರಿಸಿದ ಪತಿ
