ಬೆಂಗಳೂರು: ಭಾರೀ ಮಳೆಯಾಗುತ್ತಿರುವ (Heavy Rain) ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಸನ ಜಿಲ್ಲೆಯ ಕೆಲ ತಾಲೂಕಿಗಳಿಗೆ ಸೋಮವಾರ(ಆ.18) ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ (School holiday) ಘೋಷಣೆ ಮಾಡಿದ್ದಾರೆ.
ಉತ್ತರ ಕನ್ನಡ: ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೋಯಿಡಾ, ಯಲ್ಲಾಪುರ, ದಾಂಡೇಲಿ ತಾಲೂಕುಗಳಿಗೆ ರಜೆ ಘೋಷಣೆಯಾಗಿದೆ.
ಕೊಡಗು: ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಇದ್ದು, ಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜ ಅವರು ಆದೇಶಿಸಿದ್ದಾರೆ.
ಹಾಸನ: ಸಕಲೇಶಪುರ, ಬೇಲೂರು ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆಯಾಗಿದೆ. ಆಲೂರು ತಾಲ್ಲೂಕಿನ, ಕೆಂಚಮ್ಮನ ಹೊಸಕೋಟೆ ಹೋಬಳಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಣೆಯಾಗಿದೆ.
ಚಿಕ್ಕಮಗಳೂರು: ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್.ಪುರ, ಕಳಸ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
ಶಿವಮೊಗ್ಗ: ಹೊಸನರ, ಸಾಗರ ತಾಲೂಕಿನ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.