ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು (Rain), ಕುಮಟಾ (Kumta) ತಾಲೂಕಿನ ಮುಸುಗುಪ್ಪ ಬಳಿ ಮೂರೂರು-ಹರಕಡೆ ಸಂಪರ್ಕ ರಸ್ತೆಯಲ್ಲಿ ಗುಡ್ಡ ಕುಸಿದಿದೆ.
ಗುಡ್ಡ ಕುಸಿತದಿಂದ (Landslide ) ರಸ್ತೆಗೆ ಭಾರೀ ಗಾತ್ರದ ಬಂಡೆಗಲ್ಲು ಉರುಳಿ ಬಂದಿದೆ. ಪರಿಣಾಮ ಮೂರೂರು-ಹರಕಡೆ ನಡುವಿನ ರಸ್ತೆ ಬಂದ್ ಆಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಹನ ಸವಾರರಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಭಾರೀ ಮಳೆಗೆ ಕೊಚ್ಚಿ ಹೋಯ್ತು ಹೈವೇ| ಕುಮಟಾ – ಶಿರಸಿ ಸಂಪರ್ಕ ಕಡಿತ
ಜಿಲ್ಲೆಯಲ್ಲಿ ಶುಕ್ರವಾರ ಸುರಿದ ಭಾರೀ ಮಳೆಗೆ (Rain) ದೇವಿಮನೆ ಘಟ್ಟದಲ್ಲಿ (Devimane Ghat) ರಾಷ್ಟ್ರೀಯ ಹೆದ್ದಾರಿಯೇ ಕೊಚ್ಚಿ ಹೋಗಿತ್ತು. ಇದರಿಂದ ಕುಮಟಾ – ಶಿರಸಿ (Kumta- Sirsi) ಸಂಪರ್ಕ ಕಡಿತಗೊಂಡಿತ್ತು. ಕಳೆದ ಒಂದು ವರ್ಷದಿಂದ 766ಇ ಹೆದ್ದಾರಿ ಕಾಮಗಾರಿ ನಡೆಯುತಿತ್ತು.
ಮುಂಗಾರಿನ ಆರಂಭದಲ್ಲೇ ಮಳೆ ಅಬ್ಬರಿಸುತ್ತಿದ್ದು, ರಾಜ್ಯದ ನಾನ ಕಡೆ ಅವಾಂತರಗಳು ಸೃಷ್ಟಿಯಾಗುತ್ತಿವೆ. ಆರಂಭದಲ್ಲೇ ಹೀಗಾದರೆ, ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾದರೆ ಎಂಬ ಆತಂಕ ಸಹ ಜನರನ್ನು ಕಾಡುತ್ತಿದೆ. ಇದನ್ನೂ ಓದಿ: ಧಾರಾಕಾರ ಮಳೆ – ಹೇಮಾವತಿ ಡ್ಯಾಂ ಒಳಹರಿವಿನಲ್ಲಿ ಭಾರೀ ಏರಿಕೆ