ಬೆಂಗಳೂರು: ಮಹಾರಾಷ್ಟ್ರದಲ್ಲಿ ಮುಂಗಾರು ಮಳೆ ಆರ್ಭಟ ಶುರುವಾಗಿದ್ದು, ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆ ಸಂಪೂರ್ಣ ಭರ್ತಿ ಆಗಿದೆ. ಇದರಿಂದ ವಿಜಯಪುರ, ಬಾಗಲಕೋಟೆ ಜನರ ಮುಖದಲ್ಲಿ ಮಂದಹಾಸ ಮೂಡಿದೆ. ಜಲಾಶಯದ ಗರಿಷ್ಟ ಮಟ್ಟ 519.60 ಮೀ (123.081 ಟಿಎಂಸಿ) ಇದ್ದು, ಸದ್ಯ 519.25 ಮೀ (119 ಟಿಎಂಸಿ) ನೀರು ಸಂಗ್ರಹಣೆ ಆಗಿದೆ. 1 ಲಕ್ಷ 7 ಸಾವಿರ ಕ್ಯೂಸೆಕ್ ನೀರಿನ ಒಳಹರಿವಿದ್ದು, ಜಲಾಶಯದ 26 ಗೇಟ್ ಮುಖಾಂತರ ನಾರಾಯಣಪುರ ಜಲಾಶಯಕ್ಕೆ 1 ಲಕ್ಷ 32 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. 26 ಕ್ರಸ್ಟ್ ಗೇಟ್‍ಗಳ ಮುಖಾಂತರ ನಾರಾಯಣಪುರ ಜಲಾಶಯಕ್ಕೆ ನೀರು ಬಿಟ್ಟ ಕಾರಣ ಆ ರುದ್ರ ರಮಣೀಯ ದೃಶ್ಯವನ್ನು ನೋಡಲು ಜನರು ಬರುತ್ತಿದ್ದಾರೆ.
Advertisement
Advertisement
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ, ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಹರಿಬಿಡಲಾಗಿದೆ. ಮಹಾರಾಷ್ಟದಾದ್ಯಂತ ಧಾರಾಕಾರ ಮಳೆಯಾಗಿದ್ದು ವಿಜಯಪುರದ ಆಲಮಟ್ಟಿ ಜಲಾಶಯ ತುಂಬಿದೆ. ಈ ಹಿನ್ನೆಲೆಯಲ್ಲಿ ಆಲಮಟ್ಟಿ ಡ್ಯಾಮಿನಿಂದ 1,90,000 ಕ್ಯೂಸೆಕ್ ನೀರನ್ನು ಬಸವಸಾಗರ ಜಲಾಶಯಕ್ಕೆ ನೀರು ಹರಿಬಿಡಲಾಗಿದೆ. ಆದ್ದರಿಂದ ಬಸವಸಾಗರ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿ ಅಪಾಯದ ಮಟ್ಟ ತಲುಪಿದೆ. ರಾತ್ರಿಯಿಂದ ಜಲಾಶಯದ ಒಟ್ಟು 24 ಗೇಟ್‍ಗಳ ಪೈಕಿ, 20 ಗೇಟ್ ಮೂಲಕ ಕೃಷ್ಣಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಆದ್ದರಿಂದ ನದಿ ಪಾತ್ರದ ಜನರಿಗೆ ಯಾದಗಿರಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದೆ.
Advertisement
Advertisement
ರಾಯಚೂರು ಭಾಗದಲ್ಲಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಐದು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಕಡದರಗಡ್ಡಿ, ಮ್ಯಾದರಗಡ್ಡಿ ಸೇರಿ ನಾಲ್ಕು ನಡುಗಡ್ಡೆ ಗ್ರಾಮಗಳು ದ್ವೀಪಗಳಾಗಿ ಮಾರ್ಪಟ್ಟಿವೆ. ದೇವದುರ್ಗ ಹೂವಿನಹೆಡಗಿ ಸೇತುವೆ ಮುಳುಗಡೆ ಹಂತಕ್ಕೆ ತಲುಪಿದ್ದು ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದ ದೇವದುರ್ಗ- ಕಲಬುರ್ಗಿ ಮಾರ್ಗ ಸಂಚಾರ ಸಂಪೂರ್ಣ ಬಂದ್ ಆಗಿದೆ. ರಾಯಚೂರು ತಾಲೂಕಿನ ಕುರ್ವಕುಲಾ, ಕುರ್ವಕುರ್ದಾ ಗ್ರಾಮಗಳ ಸಂಪರ್ಕವೂ ಕಡಿತವಾಗಿದ್ದು, ಗ್ರಾಮಸ್ಥರು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ನಡುಗಡ್ಡೆ ಗ್ರಾಮಗಳ ಜನತೆಯ ಸುರಕ್ಷತೆಗಾಗಿ ಜಿಲ್ಲಾಡಳಿತ ವಿವಿಧ ತಂಡಗಳನ್ನು ರಚಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ.
ಬೆಳಗಾವಿ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಭಾರಿ ಮಳೆಯಾಗ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಕೂಡ ಬೆಳಗಾವಿ, ಖಾನಾಪೂರ, ಬೈಲಹೊಂಗಲ ಮತ್ತು ಕಿತ್ತೂರು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಎಂದು ಜಿಲ್ಲಾಧಿಕಾರಿ ಎಸ್.ಬಿ ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ. ಮತ್ತೊಂದು ಕಡೆ, ಖಾನಾಪುರ ತಾಲೂಕಿನ ಸಾತಳಿ, ಮಾಚಳಿ ಗ್ರಾಮದ, ಕಿರವಾಡ, ಹಣಬರವಾಡ ಸೇರಿದಂತೆ 20ಕ್ಕೂ ಅಧಿಕ ಗ್ರಾಮಗಳು ಈ ಅರಣ್ಯ ಪ್ರದೇಶದಲ್ಲಿದ್ದು ಮಳೆಗಾಲ ಆರಂಭವಾದ್ರೇ ಸಾಕು ಈ ಗ್ರಾಮಗಳ ಜನರು ಜೀವಭಯದಲ್ಲಿ ಬದುಕುತ್ತಿದ್ದಾರೆ. 4 ಗ್ರಾಮಗಳಿಗೆ ನದಿ ದಾಟಲು ಆ ಒಂದು ಬಿದಿರಿನ ತೂಗುಯ್ಯಾಲೆಯೇ ಆಧಾರ. ಸರ್ಕಾರದ ಗಮನಕ್ಕೆ ತಂದ್ರೂ ಪ್ರಯೋಜನ ಇಲ್ಲ.
ಮಹಾರಾಷ್ಟದಲ್ಲಿ ಮಳೆ ಎಫೆಕ್ಟ್ ನಿಂದಾಗಿ ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇದರಿಂದ, ಚಿಕ್ಕೋಡಿ ತಾಲೂಕಿನ 7 ಸೇತುವೆಗಳು ಜಲಾವೃತ ಸ್ಥಿತಿಯಲ್ಲೇ ಮುಂದುವರಿದಿವೆ. ರಾಯಬಾಗ ತಾಲೂಕಿನ ಕುಡಚಿ – ಉಗಾರ, ಕಲ್ಲೋಳ- ಯಡೂರ, ಮಲಿಕವಾಡ- ದತ್ತವಾಡ ಸೇರಿದಂತೆ 7 ಸೇತುವೆಗಳು ನೀರಿನಲ್ಲೇ ಇವೆ. ದೂದಗಂಗಾ, ವೇದಗಂಗಾ, ಕೃಷ್ಣಾ , ನದಿಗೆ ಅಡ್ಡಲಾಗಿ ಈ ಸೇತುವೆಗಳನ್ನು ನಿರ್ಮಿಸಲಾಗಿದೆ. ಸೇತುವೆ ಮುಳುಗಡೆಯಿಂದ ಪ್ರಯಾಣಿಕರು ಪರದಾಡ್ತಿದ್ದಾರೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ದತ್ತ ಮಂದಿರ, ಮುಲ್ಲಾನಕಿ ದರ್ಗಾ, ಕಾರದಗಾ ಗ್ರಾಮದ ಬಂಗಾಲಿ ಬಾಬಾ ದೇವಸ್ಥಾನಗಳೂ ಜಲಾವೃತವಾಗಿವೆ.
ಕಬಿನಿ ಹಾಗೂ ಕೆಆರ್‍ಎಸ್‍ನಿಂದ 12 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಪರಿಣಾಮ ಚಾಮರಾಜನಗರ ಜಿಲ್ಲೆಯ ಭರಚುಕ್ಕಿ ಜಲಪಾತ ಮೈದುಂಬಿ, ಧುಮ್ಮಿಕ್ಕುತ್ತಿ. ಪ್ರವಾಸಿಗರ ಸಂಖ್ಯೆಯೂ ನಿಧಾನವಾಗಿ ಹೆಚ್ಚಾಗ್ತಿದೆ.