ಬಳ್ಳಾರಿ: ವಿಜಯನಗರ (Vijayanagara) ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ.
ಸಣ್ಣ ಹಣ್ಣುಗಳು ಗಿಡದಿಂದ ಉದುರಿದ ಹಾಗೆ ಆಲಿಕಲ್ಲು ಸುರಿದಿದೆ. ಇನ್ನೂ ಬಿಸಿಲಿಗೆ ಕಾದು ಕೆಂಡವಾಗಿದ್ದ ಜನರಿಗೆ ಮಳೆರಾಯ ತಂಪೆರದಿದ್ದಾನೆ. ಮೊದಲ ವರ್ಷಧಾರೆಯಲ್ಲೇ ಆಲಿಕಲ್ಲು ಮಳೆ (Heavy Rain) ಕಂಡು ಜನ ಫುಲ್ ಖುಷ್ ಆಗಿದ್ದಾರೆ. ಇದನ್ನೂ ಓದಿ: Mumbai Attack| ರಾಣಾ ವಿರುದ್ಧ ಸಾಕ್ಷಿ ನುಡಿಯಲಿದ್ದಾರೆ ನಿಗೂಢ ವ್ಯಕ್ತಿಗಳು!
ಮತ್ತೊಂದೆಡೆ ಭತ್ತ ಬೆಳಿದಿದ್ದ ರೈತರಿಗೆ ಮಳೆ ಸ್ವಲ್ಪ ಪ್ರಮಾಣದಲ್ಲಿ ಆತಂಕ ತಂದಿದೆ. ರಾಜ್ಯದ ಹಲವೆಡೆ ಪೂರ್ವ ಹಿಂಗಾರು ಮಳೆ ಉತ್ತಮವಾಗಿ ಸುರಿಯುತ್ತಿರೋದ್ರಿಂದ ಅವಧಿಗೂ ಮುನ್ನವೇ ಬಿತ್ತನೆಯ ಆಶಾಭಾವನೆಯಲ್ಲಿ ಅನ್ನಧಾತರಿದ್ದಾರೆ. ಇದನ್ನೂ ಓದಿ: ಒಂದಕ್ಕೆ 60 ಲಕ್ಷ – 11 ಅಪರೂಪದ ಹಲ್ಲಿಗಳ ಕಳ್ಳಸಾಗಾಣಿಕೆಗೆ ಯತ್ನಿಸಿ ಸಿಕ್ಕಿಬಿದ್ದ ಗ್ಯಾಂಗ್!
ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆ
ಇನ್ನೂ ರಾಜ್ಯದ ಹಲವೆಡೆ ಇಂದಿನಿಂದ ಏ.16ರ ವರೆಗೆ ಭಾರೀ ಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಗಾಳಿ ಪ್ರತಿ ಗಂಟೆಗೆ 40-50 ಕಿಮಿ ವೇಗದಲ್ಲಿ ಬೀಸಲಿದೆ. ಬೆಂಗಳೂರಿನಲ್ಲಿ ಇಂದು (ಏ.12), ನಾಳೆ ಹಗುರ ಮಳೆಯಾಗಲಿದೆ. ನಗರದ ಕೆಲವೆಡೆ ಮೋಡಕವಿದ ವಾತಾವರಣ ಇದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: ರಾಯಚೂರು | ಮಸ್ಕಿ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ – ಭತ್ತದ ಬೆಳೆ ಹಾನಿ